ಶುದ್ಧ ಕಾಯಕದ ಮಹತ್ವ ತಿಳಿಸಿಕೊಟ್ಟ ಮಾಚಿದೇವರು

ಕೆ.ಆರ್.ಪೇಟೆಯ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು.
ಕೆ.ಆರ್.ಪೇಟೆಯ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು.
Published on

ಕೆ.ಆರ್.ಪೇಟೆ: ಬಸವಣ್ಣನವರ ತತ್ವ-ಸಿದ್ಧಾಂತಗಳನ್ನು ಪಾಲಿಸುವ ಮೂಲಕ ಸಮಾಜಕ್ಕೆ ಶುದ್ಧ ಕಾಯಕದ ಮಹತ್ವ ತಿಳಿಸಿಕೊಟ್ಟ ಮಡಿವಾಳ ಮಾಚಿದೇವರು ಮಹಾನ್ ಶಿವಶರಣ ಎಂದು ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ತಾಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಮಡಿವಾಳ ಮಾಚಿದೇವರ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಅಸಮಾನತೆ ತೊಲಗಿಸಲು ಹೋರಾಡಿದವರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರು. ಇವರು ಕಾಯಕ ನಿಷ್ಠೆಗೆ ಹೆಚ್ಚಿನ ಒತ್ತು ನೀಡಿದ್ದರು. ಜತೆಗೆ ಶೋಷಿತ ವರ್ಗದ ಏಳಿಗೆಗೆ ಶ್ರಮಿಸಿದ್ದರು. ಇವರು ರಚಿಸಿದ ವಚನಗಳು ಉತ್ತಮ ಸಮಾಜಕ್ಕೆ ದಾರಿದೀಪವಾಗಿವೆ. ಈ ದಿಸೆಯಲ್ಲಿ ಸಮುದಾಯದ ಜನರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವುದರ ಜತೆಗೆ ಸಂಘಟಿತರಾಗಬೇಕಿದೆ. ಆಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ತಹಸೀಲ್ದಾರ್ ಎಸ್.ಯು.ಡಾ.ಅಶೋಕ್ ಮಾತನಾಡಿ, ಸರ್ಕಾರ ಎಲ್ಲ ಸಮುದಾಯದ ಮಹಾನ್ ಪುರುಷರ ಜಯಂತಿಯನ್ನು ಆಚರಿಸುತ್ತಿದೆ. ಹಾಗಾಗಿ ಶರಣರ ತತ್ವಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದರು.

ತಾಲೂಕು ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ಶೀಳನೆರೆ ಸಿದ್ದೇಶ್, ಮಡಿವಾಳ ಸಂಘದ ಕಾರ್ಯದರ್ಶಿ ಸುಬ್ರಮಣ್ಯ, ಖಜಾಂಚಿ ಮಂಜು, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಮಣಿ, ಚೌಡೇನಹಳ್ಳಿ ಲತಾ ಕೇಶವ, ಶಿಕ್ಷಕ ಪಿ.ಜೆ.ವೆಂಕಟರಾಮ್, ಗ್ರೇಡ್-2 ತಹಸೀಲ್ದಾರ್ ಲೋಕೇಶ್, ಕಸಬಾ ಆರ್‌ಐ ಜ್ಞಾನೇಶ್ ಸೇರಿದಂತೆ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net