ಕೂಡುಮಂಗಳೂರುವಿನಲ್ಲಿ ಹೊಲಿಗೆ ಯಂತ್ರ ವಿತರಣೆ

Machine
Published on

ಕುಶಾಲನಗರ:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.25 ರ ನಿಧಿಯಲ್ಲಿ ಕೊಡ ಮಾಡುವ ಹೊಲಿಗೆ ಯಂತ್ರವನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ. ಶಂಶುದ್ಧೀನ್ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ವಿತರಿಸಿದರು.

ನಂತರ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಮಟ್ಟವನ್ನು ಸುಧಾರಿಸುವ ದೃಷ್ಟಿಯಿಂದ ಶೇ.25ರ ನಿಧಿಯಲ್ಲಿ ಹೊಲಿಗೆ ಯಂತ್ರ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳು, ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಸಹಾಯ ಧನ, ಅಂತ್ಯಸAಸ್ಕಾರದ ಹಣ ನೀಡಲಾಗುವುದು. ಸಂಬAಧಿಸಿದವರು ಪಂಚಾಯಿತಿಗೆ ಅರ್ಜಿ ನೀಡಿ ಇದರ ಉಪಯೋಗ ಪಡಿಸಿಕೊಳ್ಳಬೇಕು ಎಂದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಮಾತನಾಡಿ, ಶೇ.25 ರ ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಿಸಲಾಗುತ್ತಿದೆ. ಹಾಗೆಯೇ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಸರ್ಕಾರ ನೀಡುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭ ಲೆಕ್ಕ ಸಹಾಯಕಿ ಮಮತಾ, ಬಿಲ್ ಕಲೆಕ್ಟರ್ ಅವಿನಾಶ್, ಸಿಬ್ಬಂದಿ ಪವಿತ್ರ, ಲೈನಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net