ಕಾರ್ಮಿಕರ ಕೊರತೆ ನೀಗಿಸಲು ಯಂತ್ರೋಪಕರಣ ಸಹಕಾರಿ

kota krishi
Published on

ಕೋಟ: ಕೇಂದ್ರ ಸರ್ಕಾರ ರೈತ ಸಮುದಾಯಕ್ಕೆ ವಿವಿಧ ರೈತೋಪಯೋಗಿ ಕಾರ್ಯಕ್ರಮಗಳನ್ನು ನೀಡುತ್ತಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು, ಪ್ರಸ್ತುತ ಕಾಲದಲ್ಲಿ ಯಂತ್ರೋಪಕರಣಗಳ ಮೂಲಕ ಕೃಷಿ ಕಾರ್ಯ ನಡೆಸಲಾಗುತ್ತಿದೆ. ಕಾರ್ಮಿಕರ ಕೊರತೆ ನೀಗಿಸಲು ಯಾಂತ್ರೀಕೃತ ಕೃಷಿ ಪದ್ಧತಿ ಸಹಕಾರಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ, ಉಡುಪಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೋಟ ಗ್ರಾಪಂ, ಪ್ರಕೃತಿ ಸಂಜೀವಿನಿ ಸಂಘ, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೋಟ ಗ್ರಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವ ಮುಂಗಾರು ವಿಕಸಿತ ಕೃಷಿ ಸಂಕಲ್ಪ ಅಭಿಯಾನ-2025 ಕೃಷಿ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಬ್ರಹ್ಮಾವರ ತಾಲೂಕಿನ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಾದ ಸುಪ್ರಭಾ, ಡಾ.ರಾಜೀವ, ಡಾ.ರೇವಣ್ಣ, ಉಡುಪಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಡಾ.ಭೂಮಿಕಾ ಭಾಗವಹಿಸಿದ್ದರು.

ಕೋಟ ಪಂಚಾಯಿತಿ ಉಪಾಧ್ಯಕ್ಷ ಪಾಂಡು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ರೈತ ಉತ್ಪಾದಕ ಕಂಪನಿಯ ಮುಖ್ಯಸ್ಥ ಶ್ರಾವಿತ್ ಶೆಟ್ಟಿ, ಬ್ರಹ್ಮಾವರ ಕೃಷಿ ಡಿಪ್ಲೊಮಾ ಕಾಲೇಜಿನ ಪ್ರಾಂಶುಪಾಲ ಸುಧೀರ್ ಕಾಮತ್ ಕೆ.ವಿ., ಕೋಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಉಪಸ್ಥಿತರಿದ್ದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಧನಂಜಯ ಸ್ವಾಗತಿಸಿದರು. ಮತ್ಸೃ ವಿಜ್ಞಾನದ ಡಾ.ಸದಾನಂದ ಆಚಾರ್ಯ ಬಿ. ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net