ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕುತಂತ್ರ ನಡೆದಿದೆ; ಸಚಿವ ಮಧು ಬಂಗಾರಪ್ಪ

madhu-bangarappa-01.jpg
Published on

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕುತಂತ್ರ ನಡೆದಿದೆ ಎಂದು ಪ್ರಾಥಮಿಕ ‌ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ್ಳೆಯವರನ್ನ ಕೆಳಗಿಳಿಸಲು ಕುತಂತ್ರ ಇರುತ್ತೆ, ಬಿಜೆಪಿಯವರು ನಿಸ್ಸಿಮರು.ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ.ಬಾಂಬೆ ಬಾಯ್ಸ ಅಂತಾ ನೀವೆ ಎಲ್ಲ ಹಾಕಿದ್ರಿ‌ ಇಂತಹ ಸಂಪ್ರದಾಯ ಬೇಕಾ ನಮಗೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರನ್ನಇಳಿಸೊಕೆ ಯಾರಿಂದಲೂ ಸಾಧ್ಯವಿಲ್ಲ. ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಅನೋದು ನಮ್ಮೆಲ್ಲರ ಆಸೆ.ಕೋರ್ಟ್ ನಲ್ಲಿ ಅರವಿಂದ ಕ್ರೆಜಿವಾಲ್, ಮಮತಾ ಬ್ಯಾನರ್ಜಿಯ ಕೇಸ್ ಇದೆ, ಇವರಿಗೆ ಸಿದ್ದರಾಮಯ್ಯ ಅಷ್ಟೇ ಯಾಕೆ ಕಾಣ್ತಾರೆ ಎಂದ ಮಧುಬಂಗರಾಪ್ಪ ಪ್ರಶ್ನಿಸಿದರು.

ನಮ್ಮ ತಂದೆಯವರು ಮುಖ್ಯಮಂತ್ರಿ ಇದ್ದಾಗ ಬೇಕಾದಷ್ಟು ಕೇಸ್ ಗಳನ್ನ ನೋಡಿದ್ದೇವೆ, ಇದರ ಬಗ್ಗೆ ಚರ್ಚೆ ಮಾಡೋ ಅವಶ್ಯಕತೆ ಇಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net