ಮದನಾ ಗ್ರಾಪಂ ಪಿಡಿಒ ಸಸ್ಪೆಂಡ್

Suspend
Published on

ಸೇಡಂ: ಮದನಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಶೀರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್‌ಸಿಂಗ್ ಮೀನಾ ಆದೇಶಿಸಿದ್ದಾರೆ.

14 ಮತ್ತು 15ನೇ ಹಣಕಾಸು ಯೋಜನೆಯಡಿ ಅಕ್ರಮವೆಸಗಿರುವ ಬಗ್ಗೆ ಗ್ರಾಪಂ ಸದಸ್ಯ ಹಣಮಂತ ಗೊರ್ಲಾ ದೂರು ಸಲ್ಲಿಸಿದ್ದರು. ಅಲ್ಲದೆ ಸದಸ್ಯೆಯ ಪತಿಯೊಬ್ಬರಿಗೆ ಮೊಬೈಲ್‌ನಲ್ಲಿ ಮಾತನಾಡಿ, ಅಸಭ್ಯವಾಗಿ ನಿಂದಿಸಿರುವುದು ದೊಡ್ಡ ಸುದ್ದಿಯಾಗಿತ್ತು. ಹೀಗಾಗಿ ಪಿಡಿಒಗೆ ನೋಟಿಸ್ ನೀಡಲಾಗಿತ್ತು. ತಾಪಂ ಇಒ ಸೇರಿ ವಿವಿಧ ಹಂತದ ಅಧಿಕಾರಿಗಳು ಪರಿಶೀಲನೆ ನಡೆಸಿ ಸಲ್ಲಿಸಿದ ವರದಿ ಆಧರಿಸಿ ಇಲಾಖೆ ವಿಚಾರಣೆ ಕಾದಿರಿಸಿ ಪಿಡಿಒ ಬಶೀರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net