ಮಾದಪ್ಪನ ಭಕ್ತ ಹೃದಯಾಘಾತದಿಂದ ಸಾವು

Oplus_131072
ಮೃತ ಸತೀಶ್.
Published on

ನಂಜನಗೂಡು : ಶ್ರೀ ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆಯಲು ಹೋಗಿದ್ದ ವ್ಯಕ್ತಿ ಬುಧವಾರ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಸತೀಶ್ (53) ಮೃತರು.

ಕೋಣನೂರು ಗ್ರಾಮದಿಂದ ಸ್ನೇಹಿತರೊಡನೆ ಬಸ್ಸಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾಹಿತಿ ಕೇಂದ್ರದ ಬಳಿ ರೂಂ ಪಡೆಯಲು ಅಲ್ಲಿನ ಕುರ್ಚಿಯ ಮೇಲೆ ಕುಳಿತಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ನೇಹಿತರು ಬೆಟ್ಟದಲ್ಲಿರುವ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅಸುನೀಗಿದ್ದಾರೆ. ಇವರಿಗೆ ಪತ್ನಿ, ಪುತ್ರ-ಪುತ್ರಿ ಇದ್ದಾರೆ. ಗುರುವಾರ ಸ್ವಗ್ರಾಮದ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net