ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘ 2023-24 ನೇ ಸಾಲಿನಲ್ಲಿ 2.27 ಲಕ್ಷ ರೂ.ಗಳ ನಿವ್ವಳ ಲಾಭಗಳಿದೆ ಎಂದು ಸಂಘದ ಅಧ್ಯಕ್ಷ ಎಸ್.ಎಂ.ಗಂಗಾಧರ್ ತಿಳಿಸಿದರು. ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘ ಭಾನುವಾರ ಹಮ್ಮಿಕೊಂಡಿದ್ದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘವು ಸರ್ವ ಸದಸ್ಯರ ಸಹಕಾರದಿಂದ ಅಭಿವೃದ್ಧಿ ಪಥದತ್ತ ದಾಪುಗಾಲು ಹಾಕುತ್ತಿದೆ. ಮುಂದೆಯೂ ಸದಸ್ಯರು ಇದೇ ರೀತಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸದಸ್ಯರು ಸಕಾಲಕ್ಕೆ ಸಾಲ ಮರುಪಾವತಿ ಮಾಡಿ ಸಂಘ ಆರ್ಥಿಕವಾಗಿ ಸದೃಢರಾಗಲು ಕೈ ಜೋಡಿಸಬೇಕು ಎಂದ. ಸಂಘದ ವತಿಯಿಂದ ನಿವೇಶನ ಖರೀದಿ ಮಾಡಿದ್ದು, ಶೀಘ್ರವಾಗಿ ನೂತನ ಕಟ್ಟಡ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.