ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಬುಧವಾರ

16M.D.R.8
???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಮದ್ದೂರು : ಪಟ್ಟಣದ ಶಿವಪುರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು
ಸೆ.18 ರಂದು ಹಮ್ಮಿಕೊಂಡಿದ್ದು ಕಾರ್ಯಕರ್ತರು, ಮುಖಂಡರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು.
ಬುಧವಾರ ಬೆಳಗ್ಗೆ 11 ಗಂಟೆಗೆ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ತೈಲೂರು ಚಲುವರಾಜು ಹಾಗೂ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಅಣ್ಣೂರು ರಾಜೀವ್ ಅಧಿಕಾರ ಸ್ವೀಕರಿಸಲಿದ್ದಾರೆ. 4 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ವಿರೋಧ ಪಕ್ಷದ ಅಪಪ್ರಚಾರ: ನಾಗಮಂಗಲ ತಾಲೂಕಿನಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಘಟನೆಯನ್ನು ವಿರೋಧ ಪಕ್ಷದವರು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ. ಇಲ್ಲಸಲ್ಲದ ಅಪಪ್ರಚಾರ ಮಾಡುವ ಮೂಲಕ ಬೆಂಕಿಗೆ ತುಪ್ಪ ಸುರಿಯುವಂತ ಕೆಲಸಕ್ಕೆ ಮುಂದಾಗಿದ್ದಾರೆಂದು ಕೆ.ಎಂ.ಉದಯ್ ಆರೋಪಿಸಿದರು. ಈಗಾಗಲೇ ಸರ್ಕಾರ ಹಾಗೂ ಗೃಹಸಚಿವರು ಮತ್ತು ಪೊಲೀಸ್ ಇಲಾಖೆ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತಿರುವುದಾಗಿ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿ.ಪಂ.ಮಾಜಿ ಸದಸ್ಯ ಅಣ್ಣೂರು ರಾಜೀವ್, ಮುಖಂಡ ವಳಗೆರೆಹಳ್ಳಿ ಶಂಕರೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net