ಹಂತ ಹಂತವಾಗಿ ಮದ್ದೂರು ಕ್ಷೇತ್ರ ಅಭಿವೃದ್ಧಿ

08M.D.R.5
ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಕದಲೂರು ರಾಮಕೃಷ್ಣ, ಈಶ್ವರ್, ಶಿವು, ಅಶೋಕ್, ಭಕ್ಷಿ, ರವಿ, ಸುರೇಶ್ ಇದ್ದರು.
Published on

ಮದ್ದೂರು; ಅಭಿವೃದ್ಧಿ ವಿಷಯದಲ್ಲಿ ತಾಲೂಕು ಸಾಕಷ್ಟು ಹಿಂದುಳಿದಿದ್ದು, ಕ್ಷೇತ್ರವನ್ನು ಹಂತ ಹಂತವಾಗಿ ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಕೆಸ್ತೂರು ಗ್ರಾಮದಲ್ಲಿ ಶುಕ್ರವಾರ ಅಂದಾಜು 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಅಧಿಕಾರಿಗಳೊಂದಿಗೆ ಗ್ರಾಮ ಸಭೆ ನಡೆಸಿದಾಗ ನೂರಾರು ಸಮಸ್ಯೆಗಳನ್ನು ಜನರು ಗಮನಕ್ಕೆ ತಂದಿದ್ದರು. ಅವುಗಳನ್ನು ಸರಿಪಡಿಸಿ ಅನುಕೂಲ ಕಲ್ಪಿಸಲು ಸರ್ಕಾರದಿಂದ ವಿಶೇಷ ಅನುದಾನ ತರಲಾಗಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಹೆಚ್ಚಿನ ಅನುದಾನ ತಂದು ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಮಾಡುವುದು ನನ್ನ ಕನಸು. ಇದಕ್ಕೆ ಕಾಲಾವಶಕಾದ ಜತೆಗೆ, ಕ್ಷೇತ್ರದ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಗ್ರಾಪಂ ಅಧ್ಯಕ್ಷ ಈಶ್ವರ್, ಸದಸ್ಯರಾದ ಶಿವು, ಅಶೋಕ್, ಭಕ್ಷಿ, ಪಿಡಿಒ ರವಿ, ಮುಖಂಡ ಸುರೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net