

ಮದ್ದೂರು: ಪರಿಸರ ಉಳಿಸಲು ಪ್ರತಿಯೊಬ್ಬರೂ ಮುಂದಾಗಬೇಕೆಂದು ಜೆಎಂಎಫ್‌ಸಿ ಒಂದನೇ ಅಪರ ಸಿವಿಲ್ ನ್ಯಾಯಾಧೀಶೆ ಎಸ್.ಸಿ.ನಳಿನಾ ತಿಳಿಸಿದರು.ಪಟ್ಟಣದ ಎಚ್.ಕೆ.ವೀರಣ್ಣಗೌಡ ಪದವಿ ಕಾಲೇಜಿನಲ್ಲಿ ಶನಿವಾರ ನ್ಯಾಯಾಂಗ ಇಲಾಖೆ, ಎಚ್.ಕೆ.ವೀರಣ್ಣಗೌಡ ಕಾಲೇಜು, ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ‘ತಾಯಿಗೊಂದು ಸಸಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿರು.
ಪರಿಸರ ಉಳಿಸುವ ಜತೆಗೆ ಜಲ ಮೂಲಗಳಾದ ಕೆರೆ, ಕಟ್ಟೆ, ಹೊಳೆ ಹಾಗೂ ನದಿಗಳನ್ನು ರಕ್ಷಿಸುವ ಮೂಲಕ ಉತ್ತಮ ಪರಿಸರ ಉಳಿಸಲು ಪಣ ತೊಡಬೇಕು. ಒಳ್ಳೆಯ ಪರಿಸರ ಇದ್ದರೆ ಮಾತ್ರ ನೆಮ್ಮದಿ ಜೀವನ ನಡೆಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
3ನೇ ಅಪರ ಸಿವಿಲ್ ನ್ಯಾಯಾಧೀಶ ಎಸ್.ಪಿ.ಕಿರಣ್, ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಿ.ಅಪೂರ್ವಚಂದ, ವಕೀಲರ ಸಂಘದ ಅಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಎಂ.ಜೆ.ಸುಮಂತ್, ಪ್ರಾಂಶುಪಾಲ ಶಂಕರೇಗೌಡ, ತಾಲೂಕು ಅರಣ್ಯಾಧಿಕಾರಿ ಗವಿಯಪ್ಪ, ಎನ್‌ಎಸ್‌ಎಸ್ ಅಧಿಕಾರಿ ಪ್ರದೀಪ್, ಉಪನ್ಯಾಸಕರಾದ ಪ್ರಕಾಶ್, ಸುರೇಂದ್ರ, ಚಂದನ್, ಕಿರಣ್, ಸಂದೀಪ್ ಇದ್ದರು.