ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ

oppo_2
oppo_2
Published on

ಕದಂಬ ಲಯನ್ಸ್ ಸಂಸ್ಥೆ ಅಧ್ಯಕ್ಷ ಕೆಂಗಲ್‌ಗೌಡ ಸಲಹೆ

  • ವಿಜಯವಾಣಿ ಸುದ್ದಿಜಾಲ ಮದ್ದೂರು
    ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ, ಅಧ್ಯಯನಕ್ಕೆ ಪೂರಕವಾಗುವ ಸವಲತ್ತು, ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಕದಂಬ ಲಯನ್ಸ್ ಸಂಸ್ಥೆ ಅಧ್ಯಕ್ಷ ಕೆಂಗಲ್‌ಗೌಡ ತಿಳಿಸಿದರು.
    ತಾಲೂಕಿನ ಮರಕಾಡದೊಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಸ್ಥೆ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಅಗತ್ಯ ಲೇಖನ ಸಾಮಗ್ರಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜಮುಖಿ ಸೇವಾ ಕಾರ್ಯಗಳ ಜತೆಗೆ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪ್ರತಿ ಹೋಬಳಿ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ, ನೇತ್ರಾ ಶಸ್ತ್ರ ಚಿಕಿತ್ಸೆ ಶಿಬಿರ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಕೊಡುಗೆ ಇನ್ನಿತರ ಸೇವಾ ಕಾರ್ಯಗಳನ್ನು ನಮ್ಮ ಸಂಸ್ಥೆ ಕೈಗೊಡಿದೆ. ಇತರೆ ಸಂಘ ಸಂಸ್ಥೆಗಳಿಗೆ ಮಾದರಿಯಾಗಿ ಕೆಲಸ ನಿರ್ವಹಿಸುತ್ತಿರುವುದಾಗಿ ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net