ಮದ್ದೂರು: ಪಟ್ಟಣ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಎಲ್ಲ ರೀತಿಯ ಕ್ರಮ ವಹಿಸುತ್ತಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಕೈ ಗೊಳ್ಳಬೇಕಾದ ಕ್ರಮಗಳ ಕುರಿತುಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರೆಯಲಾಗಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಪಾಲನೆ ಕಾರಣ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ಗಳು ತಡವಾಗಿದ್ದವು. ಈಗ ಪುರಸಭೆ, ಕೃಷಿ ಇಲಾಖೆ, ಸರ್ವೆ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ತ್ವರಿತಗತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು.