ಮಧು ಬಂಗಾರಪ್ಪ ರಾಜೀನಾಮೆ ನೀಡಲಿ

11
ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿಯಿಂದ ಮೂಡಲಗಿ ತಹಸೀಲ್ದಾರ್ ಮಹಾದೇವ ಸನ್ನಮುರಿಗೆ ಮನವಿ ಸಲ್ಲಿಸಲಾಯಿತು. ಮಹಾದೇವ ನವನಿ, ಶಂಕರ ಹಿರೇಮಠ, ಇತರರಿದ್ದರು.
Published on

ಮೂಡಲಗಿ: ಚೆಕ್ ಬೌನ್ಸ್ ವಂಚನೆ ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದ ವತಿಯಿಂದ ಆಗ್ರಹಿಸಿ ಪಟ್ಟಣದಲ್ಲಿ ಬುಧವಾರ ತಹಸೀಲ್ದಾರ್ ಮಹಾದೇವ ಸನ್ನಮುರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಎಬಿವಿಪಿ ಚಿಕ್ಕೋಡಿ ಜಿಲ್ಲಾ ಸಂಚಾಲಕ ಮಹಾದೇವ ನವನಿ ಮಾತನಾಡಿ, ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ಮಧು ಬಂಗಾರಪ್ಪ ಸಚಿವ ಸ್ಥಾನದಲ್ಲಿ ಮುಂದುವರಿದ್ದಾರೆ. ಸಚಿವರು ಕೂಡಲೇ ರಾಜೀನಾಮೆ ನೀಡಬೇಕಂದು ಆಗ್ರಹಿಸಿದರು.

ಬಸವರಾಜ ಕೋಣಿ, ಶಂಕರ ಹಿರೇಮಠ, ಸಿದ್ದು ಮಾಕಳಿ, ಸದಾಶಿವ ಜೋಡಟ್ಟಿ, ಶ್ರೀಶೈಲ ಮಹಾಲಿಂಗಪುರ, ಪವನ ಮಗದುಮ್ಮ, ಸಾಗರ ಮಗದುಮ್ಮ, ಪ್ರಜ್ವಲ ಶಾವನ್ನವರ, ಬಸವರಾಜ ಮುಟಾರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net