

ಬೆಳ್ತಂಗಡಿ: ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹಾನಂದ ಸರಸ್ವತಿ ಸ್ವಾಮೀಜಿಯವರನ್ನು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಶುಕ್ರವಾರ ಭೇಟಿ ಮಾಡಿ ಗುರು ಪಾದುಕಾ ಪೂಜೆ ನೇರವೇರಿಸಿದರು.
ಶಾಸಕ, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕೆಪಿಸಿಸಿ ಕಾರ್ಯದರ್ಶಿ ಹಾಗೂ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ತಾಲೂಕು ಮಹಿಳಾ ಸಮಿತಿ ಅಧ್ಯಕ್ಷೆ ಉಷಾ ಶರತ್, ಅಂಡಿಂಜೆ ಗ್ರಾಮ ಪಂಚಾಯಿತಿ ಸದಸ್ಯೆ ವಂದನಾ, ಯಶೋದರ ಚಾರ್ಮಾಡಿ, ಹರೀಶ್ ಸುವರ್ಣ ಕನ್ಯಾಡಿ, ಕಾಂಗ್ರೆಸ್ ಮುಖಂಡರಾದ ಜೆಸಿಂತಾ ಮೋನಿಸ್, ಸೌಮ್ಯಾ ಲಾಯಿಲ, ಚಾತುರ್ಮಾಸ್ಯ ಸಮಿತಿ ಕಾರ್ಯದರ್ಶಿ ಗಣೇಶ್ ನಾವೂರ್, ಸಂಚಾಲಕ ಪ್ರಶಾಂತ್ ಪಾರೆಂಕಿ, ಸೇವಾ ಸಮಿತಿ ಕಾರ್ಯದರ್ಶಿ ಚಿದಾನಂದ ಇಡ್ಯಾ, ಸಮತಿ ಸದಸ್ಯರಾದ ರಾಜೇಶ್ ಮೂಡುಕೋಡಿ ಮೊದಲಾದವರು ಉಪಸ್ಥಿತರಿದ್ದರು.