ಎಸ್ಎಸ್ಎಲ್ ಸಿ ಟಾಪರ್ ಅಂಕಿತಾಗೆ ಮಧು ಅಭಿನಂದನೆ

minister madhu bangarappa speak with sslc topper
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರು ಅವರೊಂದಿಗೆ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ದೂರವಾಣಿಯಲ್ಲಿ ಮಾತನಾಡಿದರು.
Published on

ಶಿವಮೊಗ್ಗ: ಪ್ರಸ್ತುತ ಸಾಲಿನ ಎಸ್ಎಸ್ಎಲ್ ಸಿ ಟಾಪರ್ ಅಂಕಿತಾಗೆ ಮಧು ಅಭಿನಂದನೆ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆದ ಬಾಗಲಕೋಟೆ ಮುರಾರ್ಜಿ ದೇಸಾಯಿ ವಸತಿ ಶಾಲೆ ಅಂಕಿತಾ ಬಸಪ್ಪ ಕೊಣ್ಣೂರು ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ದೂರವಾಣಿ ಮೂಲಕ ಅಭಿನಂದಿಸಿದರು.

ಅಂಕಿತಾಳಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ಇದು ಹೆಮ್ಮೆ ಸಂಗತಿ. ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು. ಅವಕಾಶ ಸಿಕ್ಕರೆ, ಖಂಡಿತ ಭೇಟಿ ಮಾಡುತ್ತೇನೆ. ಅಗತ್ಯಬಿದ್ದರೆ ಮುಂದಿನ ಉನ್ನತ ಶಿಕ್ಷಣಕ್ಕೆ ಸರ್ಕಾರದ ಹಂತದಲ್ಲಿ ಸಹಕರಿಸುವ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net