

ಮಂಡ್ಯ: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ತೀರ್ಮಾನವೇ ಅಂತಿಮ. ಅಂತೆಯೇ ಜನಾದೇಶಕ್ಕೆ ನಾವೆಲ್ಲರೂ ಕೂಡ ತಲೆ ಭಾಗಬೇಕಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಎಸ್.ಸಿ.ಮಧುಚಂದನ್ ಹೇಳಿದ್ದಾರೆ.
ನನಗೆ ಸಹಕರಿಸಿದ ಹಾಗೂ ಬೆಂಬಲಿಸಿದ ರೈತ ಸಂಘದ ಕಾರ್ಯಕರ್ತರು, ಸರ್ವೋದಯ ಕರ್ನಾಟಕ ಪಕ್ಷದ ಪದಾಧಿಕಾರಿಗಳು ಸೇರಿದಂತೆ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ನನ್ನ ಮುಂದಿನ ದಿನಗಳನ್ನು ರೈತಪರ ಸಮಾಜಮುಖಿ ಹೋರಾಟಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾರ್ವಜನಿಕ ಜೀವನದಲ್ಲಿ ಮುಂದುವರೆಯುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.