

ಚಿಕ್ಕಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ಹೆದ್ದಾರಿ ವಿಸ್ತರಣೆಯ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಸಂಬAಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ಡಾ ಕೆ.ಸುಧಾಕರ್ ತಿಳಿಸಿದ್ದಾರೆ. .
ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಮುಂಭಾಗ ರೈಲ್ವೆ ಹಳಿ ಮತ್ತು ರಸ್ತೆ ಸರ್ವೇ ಜಾಗವನ್ನು ಪರಿಶೀಲಿಸಿ ಮಾತನಾಡಿದರು.
ಮಧುಗಿರಿಯಿಂದ ಮುಳಬಾಗಿಲು ಮಾರ್ಗದ ಹೆದ್ದಾರಿ ಕಾಮಗಾರಿಯು ನಡೆಯುತ್ತಿದೆ. ಜಿಲ್ಲಾ ಕೇಂದ್ರದಲ್ಲಿ ವಿಳಂಬವಾಗುತ್ತಿರುವುದರ ಬಗ್ಗೆ ದೂರುಗಳು ಕೇಳಿ ಬಂದಿದ್ದು ಇದರ ಬಗ್ಗೆ ಸಂಬAಧಪಟ್ಟವರೊAದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಿಂದ ಜಾಗದ ವಿಚಾರವಾಗಿ ಹೆದ್ದಾರಿ ಪ್ರಾಧಿಕಾರ ಹಾಗೂ ರೈಲ್ವೆ ಇಲಾಖೆಯ ನಡುವೆ ವಿವಾದ ಉಂಟಾಗಿದೆ. ಇದನ್ನು ಬಗೆಹರಿಸಲಾಗುತ್ತದೆ. ಉಳಿದ ಕಡೆ ತ್ವರಿತ ಕಾಮಗಾರಿ ನಿರ್ವಹಣೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.
*ಪ್ರಗತಿದಾಯಕ ಕೆಲಸಗಳ ಚರ್ಚೆ
ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದರು ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ರೈತ ಉತ್ಪಾದಕ ಸಂಸ್ಥೆಗಳ ಪ್ರಗತಿ ಹಾಗು ಕಾರ್ಯ ಚಟುವಟಿಕೆ, ರಾಷ್ಟ್ರೀಯ ಹೆದ್ದಾರಿ ಕೆಲಸಗಳ ಬಗ್ಗೆ ಚರ್ಚಿಸಿದರು.
ಅಂಬೇಡ್ಕರ್ ಪುತ್ಥಳಿ ಅನಾವರಣಕ್ಕೆ ಅಡ್ಡಿ, ಕಾಣದ ಕೈಗಳ ಹಿಂದೆ ಸಚಿವರು