ಮಧುಕರ್ ಅಂಗೂರ್‌ಗೆ ಇಡಿ ಸಮನ್ಸ್

madhukar-anghur
Published on

ಬೆಂಗಳೂರು: ಅಲಯನ್ಸ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮಧುಕರ್ ಅಂಗೂರ್‌ಗೆ ಪಿಎಂಎಲ್‌ಎ ಕಾಯ್ದೆಯಡಿ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದ್ದು, ಡಿ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಡಿ.2ರಂದು ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಉಲ್ಲೆಖಿಸಲಾಗಿದೆ. ಪಾಸ್ ಪೋರ್ಟ್, ಆಧಾರ್ ಕಾರ್ಡ್, ಒಂದು ಪೋಟೊ, ಮಧುಕರ್ ಅಂಗೂರ್ ಮತ್ತು ಕುಟುಂಬದವರ ಬ್ಯಾಂಕ್ ಖಾತೆ ವಿವರ, ಸ್ಥಿರ ಮತ್ತು ಚರ ಆಸ್ತಿ ವಿವರಗಳಿರುವ ದಾಖಲೆ ಹಾಗೂ ಕಳೆದ 10 ವರ್ಷಗಳಿಗೆ ಸಂಬಂಧಿಸಿದ ಐಟಿ ರಿಟರ್ನ್ಸ್ ದಾಖಲೆಗಳನ್ನು ವಿಚಾರಣೆಗೆ ಬರುವ ವೇಳೆ ತರುವಂತೆ ಸಮನ್ಸ್‌ನಲ್ಲಿ ಉಲ್ಲೇಖಿಸಲಾಗಿದೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಮಧುಕರ್ ಅಂಗೂರ್ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿರುವ ಇಡಿ ಅಧಿಕಾರಿಗಳು ಸಾಕ್ಷ್ಯ ಕಲೆ ಹಾಕುವಲ್ಲಿ ನಿರತರಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಮಾಡಿರುವುದು ಅಥವಾ ನಿಯಮ ಉಲ್ಲಂಸಿ ವಿದೇಶಿ ಬಂಡವಾಳ ಹೂಡಿಕೆ ಮಾಡಿರುವುದು ಸಾಬೇತಾದರೆ ಇಡಿ ಅಧಿಕಾರಿಗಳು ಇವರ ಆಸ್ತಿಯನ್ನು ಮುಟ್ಟುಗೋಲು ಹಾಕಿ ಸೂಕ್ತ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net