

ಎಚ್.ಡಿ.ಕೋಟೆ: ಪುರಸಭೆ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಧುಕುಮಾರ್ ಆಯ್ಕೆಯಾದರು.
ಪಟ್ಟಣದ ಪುರಸಭೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಮಧುಕುಮಾರ್ ಒಬ್ಬರೇ ಸ್ಥಾಯಿ ಸಮಿತಿಗೆ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ಮಧುಕುಮಾರ್ ಮಾತನಾಡಿ, ನನ್ನನ್ನು ಅಧ್ಯಕ್ಷನಾಗಲು ಸಹಕಾರ ನೀಡಿದ ಶಾಸಕ ಅನಿಲ್ ಕುಮಾರ್, ಕಾಂಗ್ರೆಸ್ ಮುಖಂಡರು ಹಾಗೂ ಪುರಸಭೆ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪುರಸಭೆಯಲ್ಲಿ ಸಾಕಷ್ಟು ಕೆಲಸ ಬಾಕಿ ಇದ್ದು, ಆದಷ್ಟು ಬೇಗ ಪೂರ್ಣಗೊಳಿಸಲು ಕ್ರಮ ವಹಿಸುತ್ತೇನೆ. ಪಟ್ಟಣದಲ್ಲಿ ಕುಡಿಯುವ ನೀರು ಮತ್ತು ಮೂಲ ಸೌಕರ್ಯಗಳ ಬಗ್ಗೆ ಹೆಚ್ಚು ಒತ್ತು ನೀಡಿ ಅಭಿವೃದ್ಧಿಗೆ ಗಮನಹರಿಸುತ್ತೇನೆ. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದಾಗಿ ಭರವಸೆ ನೀಡಿದರು.
ಸ್ಥಾಯಿ ಸಮಿತಿ ಚುನಾವಣಾ ಪ್ರಕ್ರಿಯೆಯನ್ನು ಪುರಸಭೆ ಮುಖ್ಯಾಧಿಕಾರಿ ಪಿ.ಸುರೇಶ್ ನಡೆಸಿಕೊಟ್ಟರು. ಪುರಸಭೆ ಮುಂದೆ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಮತ್ತು ಬೆಂಬಲಿಗರು ಹಾರ ತುರಾಯಿ ಹಾಕಿ ಪಟಾಕಿ ಸಿಡಿಸಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಪುರಸಭೆ ಉಪಾಧ್ಯಕ್ಷ ಆಸಿಫ್ ಇಕ್ಬಾಲ್, ಸದಸ್ಯರಾದ ಎಚ್.ಸಿ.ನರಸಿಂಹಮೂರ್ತಿ, ಸೋಮಶೇಖರ್, ಲೋಕೇಶ್, ಸುಹಾಸಿನಿ ದಿನೇಶ್, ಶಾಂತಮ್ಮ, ಪ್ರೇಮ್, ಪುಟ್ಟಬಸವ, ಮುಖಂಡರಾದ ಗಿರಿಗೌಡ, ಅನ್ಸರ್, ನಿಂಗರಾಜ್, ಸೋಮು, ಯಶ್ವಂತ್, ಮಹೇಂದ್ರ, ಪದ್ಮರಾಜ್, ಸ್ಟುಡಿಯೋ ಪ್ರಕಾಶ್, ಪಾರ್ಥ, ಅನಿಲ್ ಇತರರು ಇದ್ದರು.