ಅ.2ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ಮಧ್ವ ಜಯಂತಿ

111
Published on

ರಾಜಾಂಗಣದಲ್ಲಿ ವಿಚಾರಗೋಷ್ಠಿ, ಉಪನ್ಯಾಸ

ವಿಜಯವಾಣಿ ಸುದ್ದಿಜಾಲ ಉಡುಪಿ

ದ್ವೈತ ಸಿದ್ಧಾಂತದ ಪ್ರತಿಪಾದಕರಾದ ಶ್ರೀಮಧ್ವಾಚಾರ್ಯರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಸಿದ್ಧತೆ ನಡೆಸಿದೆ. ಅ.2ರಂದು ಸಂಜೆ 4 ಗಂಟೆಗೆ ವಿಜಯದಶಮಿಯ ಶುಭದಿನದಂದು ರಾಜಾಂಗಣದಲ್ಲಿ ಧಾರ್ಮಿಕ ಸಭೆ ಆಯೋಜಿಸಲಾಗಿದೆ.

Madhwa 2
ಪುತ್ತಿಗೆ ಪರ್ಯಾಯ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪಟ್ಟದ ಕಿರಿಯ ಶಿಷ್ಯ ಸುಶ್ರೀಂದ್ರ ತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ವಿಚಾರಗೋಷ್ಠಿ ಆಯೋಜಿಸಲಾಗಿದೆ. ಆಧುನಿಕ ಜೀವನದಲ್ಲಿ ಮಧ್ವ ಸಿದ್ಧಾಂತದ ಪ್ರಸ್ತುತತೆ ಕುರಿತು ಉಪನ್ಯಾಸ ನಡೆಯಲಿದೆ. ನಿತ್ಯ ಜೀವನ, ಆಧುನಿಕ ವಿಜ್ಞಾನ ಹಾಗೂ ಆನಂದದಲ್ಲಿ ಮಧ್ವ ಸಿದ್ಧಾಂತದ ಕುರಿತು ವಿದ್ವಾನ್​ ಕೃಷ್ಣರಾಜ ಕುತ್ಪಾಡಿ, ಡಾ. ಪ್ರತೋಷ ಎ.ಪಿ., ಡಾ. ಸುದರ್ಶನ ವಿವರಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಸಂಜೆ 6:30ರಿಂದ ಡಾ. ವಿದ್ಯಾಭೂಷಣ ಅವರಿಂದ ಗಾನ ಲಹರಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಮಧ್ವ ಜಯಂತಿಯ ಆಯೋಜಕ ಮುರಳಿ ತಂತ್ರಿ, ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net