

ವಿಟ್ಲ: ಮಧ್ಯವ್ಯಸನ ಬಿಟ್ಟು ಹೊಸ ಜೀವನ ಕಟ್ಟಿಕೊಳ್ಳಿ, ನಾಯಕತ್ವ ಗುಣ ಬೆಳೆಸಿಕೊಳ್ಳಿ ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಬಾಳುವ ಕಾರ್ಯವಾಗಬೇಕು. ಮಧ್ಯವರ್ಜನ ಶಿಬಿರದಲ್ಲಿ ಭಾಗವಹಿಸಿದವರಲ್ಲಿ ೮ ಮಂದಿ ತಮ್ಮ ದುಶ್ಚಟದಿಂದ ಹೆಂಡತಿಯರ ಮಾಂಗಲ್ಯ ಸರವನ್ನು ಕಳೆದುಕೊಂಡಿದ್ದರಿಂದ ಉಚಿತ ತಾಳಿ ಒದಗಿಸಲಾಗುವುದು ಎಂದು ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಶಾಂತಿನಗರದಲ್ಲಿ ಅಕ್ಷಯ ಸಮುದಾಯ ಭವನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರದ ೧೭೨೨ ನೇ ಮಧ್ಯವರ್ಜನ ಶಿಬಿರದ ಸಮರೋಪ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಪುತ್ತೂರು ತಾಲೂಕು ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ನಮ್ಮ ನಿರ್ಧಾರ ನಮ್ಮ ಕೈಯಲ್ಲಿದೆ ಕೆಟ್ಟ ಹವ್ಯಾಸವನ್ನು ಬಿಟ್ಟು ಹೊಸ ಭವಿಷ್ಯವನ್ನು ರೂಪಿಸಿಕೊಂಡರೆ ಗ್ರಾಮ ಅಭಿವೃದ್ಧಿ ಯೋಜನೆಯ ವ್ಯಸನಮುಕ್ತ ಸಮಾಜ ನಿರ್ಮಿಸುವ ಉದ್ದೇಶದಿಂದ ಪೂಜ್ಯ ಖಾವಂದರು ಜನಜಾಗ್ರತಿ ವೇದಿಕೆಯ ಮಧ್ಯವರ್ಜನ ಶಿಬಿರದ ಮೂಲಕ ಹೊಸ ಜೀವನ ಕಟ್ಟಿಕೊಳ್ಳಲು ಮಾಡಿದ ಶಿಬಿರ ಸಾರ್ಥಕವಾಗುತ್ತೆ ಎಂದರು.
ಸಹಯೋಗದಲ್ಲಿ ನಡೆಯಿತು:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು, ತಾಲೂಕು ಜನಜಾಗೃತಿ ವೇದಿಕೆ ಬಂಟ್ವಾಳ, ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ವಿಟ್ಲ, ಪಟ್ಟಣ ಪಂಚಾಯತ್ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ವಿಟ್ಲ, ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ, ಜಸ್ಟಿಸ್ ಕೆ ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ರೋಟರಿ ಕ್ಲಬ್ ಬಂಟ್ವಾಳ, ನವಜೀವನ ಸಮಿತಿ ವಿಟ್ಲ, ಸ್ಥಳಿಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆದಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮೋನಪ್ಪ ಗೌಡ ವಹಿಸಿದ್ದರು.
ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮುಖ್ಯಸ್ಥರಾದ ಬಂಗಾರು ಅರಸ್ ಅರಮನೆ ವಿಟ್ಲ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಬಾಳಿಗ, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಜಲಜಾಕ್ಷಿ ಬಿ ಗೌಡ, ಜನಜಾಗೃತಿ ವೇದಿಕೆಯ ವಿಟ್ಲ ವಲಯ ಅಧ್ಯಕ್ಷ ಕೃಷ್ಣಯ್ಯ ಬಲ್ಲಾಳ್, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ನವೀನ್ ಚಂದ್ರ, ಶಿಬಿರದ ಯೋಗ ಶಿಕ್ಷಕ ಆನಂದ ಶೆಟ್ಟಿ, ಶಿಬಿರದ ವೈದ್ಯಾಧಿಕಾರಿ ಮನೋಹರ್ ರೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮತ್ತಿತರರು ಉಪಸ್ಥಿತರಿದ್ದರು.
ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ ಸ್ವಾಗತಿಸಿದರು. ಸಾಲೆತ್ತೂರು ವಲಯ ಮೇಲ್ವಿಚಾರಕಿ ಮೋಹಿನಿ ವಂದಿಸಿದರು. ಕೇಪು ವಲಯ ಮೇಲ್ವಿಚಾರಕ ಜಗದೀಶ್ ಹಾಗೂ ಮುಡಿಪು ವಲಯ ಮೇಲ್ವಿಚಾರಕ ಗಂಗಾಧರ್ ಕಾರ್ಯಕ್ರಮ ನಿರೂಪಿಸಿದರು.