

ನಾಪೋಕ್ಲು: ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು-ಮನ-ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಲೀಲಾವತಿ ತಿಳಿಸಿದರು.
ಮಡಿಕೇರಿ ತಾಲೂಕು ಬೆಟ್ಟಗೇರಿ ವಲಯದ ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ, ಮಡಿಕೇರಿ ತಾಲೂಕಿನ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಿಲ್ಲಾ ಜನಜಾಗೃತಿ ವೇದಿಕೆ, ಬೆಳ್ತಂಗಡಿಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸಹಯೋಗದಲ್ಲಿ ಕಾರುಗುಂದ ಗೌಡ ಸಮಾಜದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮದ್ಯವರ್ಜನ ಎಂಟು ದಿನಗಳ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಮದ್ಯಪಾನ ಎಂಬುದು ಸಮಾಜವನ್ನು ಬಾಧಿಸುವ ಮತ್ತು ಜಾಗ್ರತೆ ತಪ್ಪಿದರೆ ಯಾರನ್ನೂ ಬಿಡದ ಕಾಯಿಲೆ. ಮದ್ಯಪಾನಕ್ಕೆ ಜಾತಿ, ಧರ್ಮ, ಪಕ್ಷ ಯಾವುದೂ ಇರುವುದಿಲ್ಲ. ಹಾಗಾಗಿ ಇದೊಂದು ಸರ್ವಧರ್ಮ ಕಾರ್ಯಕ್ರಮ ಎಂದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ.ರಾಣಿ ಮಾಚಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿದರು.
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬೆಳ್ಯನ ಚಂದ್ರಪ್ರಕಾಶ್ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ದಾನಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳ ನಿಸ್ವಾರ್ಥ ಸೇವೆ ಸಲ್ಲಿಸಿದವರನ್ನು ಅಭಿನಂದಿಸಿದರು.
ಬೆಟ್ಟಗೇರಿ ವಿಎಸ್‌ಎಸ್‌ಎನ್ ಅಧ್ಯಕ್ಷ ತಳೂರು ಕಿಶೋರ್‌ಕುಮಾರ್ ಮಾತನಾಡಿ, ಎಂಟು ದಿನಗಳವರೆಗೆ ಶಿಬಿರದಲ್ಲಿ ಚಿಕಿತ್ಸೆ ಪಡೆದ ಶಿಬಿರಾರ್ಥಿಗಳು ಸದೃಢ ಸಮಾಜ ನಿರ್ಮಿಸಲು ಮುಂದಾಗಬೇಕು ಎಂದರು.
ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷರು ಅರುಣ್ ಬಾನಂಗಡ ಮದ್ಯವರ್ಜನ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ನಂದಕುಮಾರ್ ಪಟ್ಟಡ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆರೋಗ್ಯ ಸಹಾಯಕಿ ನೇತ್ರಾವತಿ ಇವರು ಎಂಟು ದಿನದ ಮದ್ಯವರ್ಜನ ಶಿಬಿರವನ್ನು ನಿರ್ವಹಿಸಿದರು.
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಟಿ.ಎಂ.ಅಯ್ಯಪ್ಪ, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಧನಂಜಯ್ ಅಗೋಳಿಕಜೆ, ಶಿಬಿರ ವ್ಯವಸ್ಥಾಪನಾ ಸಮಿತಿ, ಕೋಶಾಧಿಕಾರಿ ಮಿಲನ ಮುತ್ತಣ್ಣ, ಕಾರುಗುಂದ ಕಾಫಿ ಬೆಳೆಗಾರ ಕೊಪ್ಪಡ ಪಳಂಗಪ್ಪ, ಚೇರಂಬಾಣೆ ಗೌಡ ಸಮಾಜದ ನಿರ್ದೇಶಕರಾದ ಕೊಡಗನ ತೀರ್ಥಪ್ರಸಾದ್, ನೈಯ್ಯಣಿರ ಹೇಮಲತಾ, ಎಡಿಕೇರಿ ಪ್ರವೀಣ, ಮುಕ್ಕಾಟಿ ನಾಣಯ್ಯ, ಕಾರುಗುಂದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಪಂಡ ರಾಲಿ ಮಾದಯ್ಯ, ಕುಂದಚೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೊಡನೊಳನ ದಿನೇಶ್, ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಪಟ್ಟಮಾಡ ಡಿ.ಪೊನ್ನಪ್ಪ, ಬೆಟ್ಟಗೇರಿ ಗ್ರಾಮ ಪಂಚಾಯಿತಿ ಸದಸ್ಯರಾದ ಬಾಡನ ಲಿಖಿತಾ, ಚೇರಂಬಾಣೆ ಅರುಣ ಪದವಿಪೂರ್ವ ಕಾಲೇಜು ಅಧ್ಯಕ್ಷ ಪೊಡನೊಳಂಡ ದಿನೇಶ್, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷರಾದ ಸುಕುಮಾರ್, ವಸಂತ , ಕಾಳೇರಮ್ಮನ ಪೂವಯ್ಯ, ಕಾಳೇರಮ್ಮನ ಅಯ್ಯಣ್ಣ, ಪಟ್ಟಡ ಶರತ್‌ಕುಮಾರ್, ಉಮಾದೇವಿ, ಹೊಸೂರು ಜೆ.ಸತೀಶ್‌ಕುಮಾರ್, ಕೇಶವ, ಪಟ್ಟಡ ಸುಗುಣಕುಮಾರ್, ಬೋಪಯ್ಯ ಪುರುಷೋತ್ತಮ್, ನಿತೇಶ್, ಮೀನಾಕ್ಷಿ ಇತರರಿದ್ದರು.