ಮದ್ಯವರ್ಜನ ಶಿಬಿರ ಸಮಾರೋಪ

29-npk-1
ಕಾರುಗುಂದ ಗೌಡ ಸಮಾಜದಲ್ಲಿ ಆಯೋಜಿಸಿದ್ದ 1855ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಮುಖರನ್ನು ಸನ್ಮಾನಿಸಲಾಯಿತು. ಡಾ.ರಾಣಿ ಮಾಚಯ್ಯ, ಕಿಶೋರ್ ಕುಮಾರ್, ಅರುಣ್ ಬಾನಂಗಡ, ಹೊಸೂರು ಜೆ.ಸತೀಶ್ ಕುಮಾರ್, ಪಟ್ಟಮಾಡ ಡಿ.ಪೊನ್ನಪ್ಪ, ಧನಂಜಯ್ ಅಗೋಳಿಕಜೆ, ಲೀಲಾವತಿ ಸೇರಿದಂತೆ ಇತರರು ಇದ್ದರು.
Published on

ನಾಪೋಕ್ಲು: ಮಡಿಕೇರಿ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿವಿಧ ಸಂಘ ಸಂಸ್ಥೆಗಳು ಮತ್ತು ಊರಿನ ದಾನಿಗಳ ಸಹಕಾರದೊಂದಿಗೆ ಕಾರುಗುಂದ ಗೌಡ ಸಮಾಜದಲ್ಲಿ ಆಯೋಜಿಸಿದ್ದ 1855ನೇ ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.
ಇದೇ ವೇಳೆ ಶಿಬಿರ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಹಾಗೂ ಮಡಿಕೇರಿ ನಗರಸಭೆ ಮಾಜಿ ಸದಸ್ಯ ಟಿ.ಎಂ ಅಯ್ಯಪ್ಪ, ಅಧ್ಯಕ್ಷ , ಕಾರುಗುಂದ ಗೌಡ ಸಮಾಜದ ಕಾರ್ಯದರ್ಶಿ ಬೆಳ್ಯನ ಚಂದ್ರಪ್ರಕಾಶ್, ಕೋಶಾಧಿಕಾರಿ ಮಿಲನ್ ಮುತ್ತಣ್ಣ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ನಂದಕುಮಾರ್, ಪಟ್ಟಡ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆರೋಗ್ಯ ಸಹಾಯಕಿ ನೇತ್ರಾವತಿ ಇವರನ್ನು ಸನ್ಮಾನಿಸಲಾಯಿತು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ.ರಾಣಿ ಮಾಚಯ್ಯ, ಕಾಫೀ ಮಂಡಳಿ ನಿರ್ದೇಶಕ ಹಾಗೂ ಬೆಟ್ಟಗೇರಿ ವಿಎಸ್‌ಎಸ್‌ಎನ್ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಅರುಣ್ ಬಾನಂಗಡ, ಹೊಸೂರು ಜೆ.ಸತೀಶ್ ಕುಮಾರ್, ನಗರ ಸಭೆ ಮಾಜಿ ಅಧ್ಯಕ್ಷ ಪಟ್ಟಮಾಡ ಡಿ.ಪೊನ್ನಪ್ಪ, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಧನಂಜಯ್ ಅಗೋಳಿಕಜೆ, ಯೋಜನೆ ಜಿಲ್ಲಾ ನಿರ್ದೇಶಕಿ ಲೀಲಾವತಿ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net