ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಕೊಡುಗೆ ಶೂನ್ಯ ; ಶಾಸಕ ಬಸವರಾಜ ದಢೇಸುಗೂರು ಟೀಕೆ

071120 Maski BJP Office Madiga Community Meeting
ಮಸ್ಕಿ ಬಿಜೆಪಿ ಕಚೇರಿಯಲ್ಲಿ ಮಾದಿಗ ಸಮುದಾಯದ ಸಭೆ ಶನಿವಾರ ನಡೆಸಲಾಯಿತು. ಕನಕಗಿರಿ ಶಾಸಕ ಬಸವರಾಜ ದಢೇಸುಗೂರು ಮಾತನಾಡಿದರು.
Published on

ಮಸ್ಕಿ: ಮಾದಿಗ ಸಮುದಾಯಕ್ಕೆ ಬಿಜೆಪಿ ಬೆಂಬಲವಾಗಿದ್ದು, ಗೋವಿಂದ ಕಾರಜೋಳರನ್ನು ಉಪ ಮುಖ್ಯಮಂತ್ರಿ ಮಾಡಿದ ಕೀರ್ತಿ ಪಕ್ಷಕ್ಕೆ ಸಲ್ಲುತ್ತದೆ ಎಂದು ಕನಕಗಿರಿ ಶಾಸಕ ಬಸವರಾಜ ದಢೇಸುಗೂರು ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾದಿಗ ಸಮುದಾಯದ ಸಭೆಯಲ್ಲಿ ಮಾತನಾಡಿದರು. ದಲಿತರನ್ನು ಕಾಂಗ್ರೆಸ್ ಒಟ್ ಬ್ಯಾಂಕ್ ಮಾಡಿಕೊಂಡಿದೆ. ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ದಢೇಸುಗೂರು ಟೀಕಿಸಿದರು.

ಬರುವ ಉಪ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ರನ್ನು ಗೆಲ್ಲಿಸಿದರೆ ಮಂತ್ರಿಯಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಾರೆ. ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪ್ರತಾಪಗೌಡರಿಂದ ಜಿಲ್ಲೆಯಲ್ಲಿ ಪ್ರಗತಿ ಕಾಣಬಹುದು ಎಂದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಬರುವ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುತ್ತದೆ. ಕ್ಷೇತ್ರದ ಎಲ್ಲ ಹಳ್ಳಿಗಳಿಗೆ ನೀರಾವರಿ ಮಾಡುವ ಕನಸು ಹೊಂದಿದ್ದೇನೆ. ರೈತರ ಪರ ಮುಖ್ಯಮಂತ್ರಿ ಯಡಿಯುರಪ್ಪರಿಂದ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಜಿಪಂ ಸದಸ್ಯ ದುರುಗಪ್ಪ ಗುಡಗಲದಿನ್ನಿ, ಮುಖಂಡರಾದ ಮಹಾದೇವಪ್ಪಗೌಡ ಪಾಟೀಲ, ಅಂದಾನಪ್ಪ ಗುಂಡಳ್ಳಿ, ಬಸವಂತರಾಯ ಕುರಿ, ಜಗದೀಶ ತಾತ ಹಾಲಾಪುರ, ವಿಶ್ವನಾಥರಡ್ಡಿ ಅಮೀನಗಡ, ಶರಣಬಸವ ವಕೀಲ, ಮೌನೇಶ ಮುರಾರಿ, ಶರಣಬಸವ ಸೊಪ್ಪಿಮಠ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net