ಮಾದಿಗರದ್ದು ಶಾಪಕ್ಕೆ ಒಳಗಾದಂತೆ ಹೀನಾಯ ಸ್ಥಿತಿ

ANJANEYE-BN CHANDRAPPA
Published on

ಚಳ್ಳಕೆರೆ: ಬಹುಸಂಖ್ಯಾತ ಮಾದಿಗ ಸಮುದಾಯದ ಸಂಘಟನೆ ಬಲಗೊಳ್ಳಬೇಕಿದೆ. ಅತಿ ಹೆಚ್ಚು ಅಂಕ ಪಡೆದವರು ಪುರಸ್ಕಾರಕ್ಕೆ ಭಾಜನರಾಗುತ್ತಾರೆ. ಇದು ಇತರ ವಿದ್ಯಾರ್ಥಿಗಳಿಗೆ ಮಾದರಿ ಆಗಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ತಾಲೂಕು ಮಾದಿಗ ನೌಕರರ ಸಾಂಸ್ಕೃತಿಕ ಸಂಘ ನಗರದ ಅನಂತನಾಥ ಜೈನಭವನದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಶಾಪಕ್ಕೆ ಒಳಗಾದಂತೆ ಕೆಲ ತಾಲೂಕಿನಲ್ಲಿ ಇನ್ನೂ ಹೀನಾಯ ಸ್ಥಿತಿಯಲ್ಲಿದೆ. ಮಾದಿಗರ ಅಸ್ತಿತ್ವ ಉಳಿಯಲು ಒಳಮೀಸಲು ಸೌಲಭ್ಯ ಜಾರಿಯಾಗಬೇಕು. ಸಮುದಾಯಕ್ಕೆ ರಾಜಕೀಯ ಶಕ್ತಿ ಅಗತ್ಯವಿದೆ. ಸ್ಥಳೀಯ ಚುನಾವಣೆಗಳಲ್ಲಿ ಸಮುದಾಯದವರ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, 5 ಸಾವಿರ ವರ್ಷಗಳ ಇತಿಹಾಸವಿರುವ ಮಾದಿಗರಲ್ಲಿ ಶೋಷಿತ ಪರಿಸ್ಥಿತಿ ಇನ್ನೂ ತಪ್ಪಿಲ್ಲ. 12ನೇ ಶತಮಾನದ ಬಸವಣ್ಣನವರ ಸಾಮಾಜಿಕ ಚಳುವಳಿಗಳಿಂದಲೂ ಕೊನೆಗಾಣಲಿಲ್ಲ. ಅಂಬೇಡ್ಕರ್ ಆಶಯದಂತೆ ಶಿಕ್ಷಣದ ಪ್ರಗತಿಯಲ್ಲಿ ಸಮಾನತೆ ಕಂಡುಕೊಳ್ಳಬೇಕಿದೆ ಎಂದು ವಿದ್ಯಾರ್ಥಿಗಳಲ್ಲಿ ಕಿವಿಮಾತು ಹೇಳಿದರು.

ಶ್ರೀ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಸಚಿವರಾದ ಆರ್.ಬಿ.ತಿಮ್ಮಾಪುರ್, ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net