ಶನಿವಾರ ಅಶ್ವಿನಿ ಆಸ್ಪತ್ರೆಯಲ್ಲಿ ವೈದ್ಯಕೀಯ ಶಿಬಿರ

Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ವಿಶ್ವ ಕ್ಯಾನರ್ ದಿನಾಚರಣೆ ಪ್ರಯುಕ್ತ ಮಡಿಕೇರಿಯಲ್ಲಿರುವ ಅಶ್ವಿನಿ ಆಸ್ಪತ್ರೆಯಲ್ಲಿ ಫೆ.೪ ರಂದು ಸಾರ್ವಜನಿಕರಿಗೆ ಆರೋಗ್ಯ ತಪಾಸಣಾ ಉಚಿತ ಶಿಬಿರವನ್ನು ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಆಯೋಜಿಸಿದೆ.

ಅಶ್ವಿನಿ ಆಸ್ಪತ್ರೆ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೈಸೂರಿನ ಸುಯೋಗ್ ಆಸ್ಪತ್ರೆ, ವಾಕ್ ಮತ್ತು ಶ್ರವಣ ಇನ್‌ಪ್ಲಾಂಟ್ ಕ್ಲಿನಿಕ್ ಹಾಗೂ ಜಸ್ಟೀಸ್ ಕೆ.ಎಸ್. ಹೆಗಡೆ ಸ್ಮಾರಕ ದಂತ ವಿಭಾಗದ ಸಹಯೋಗದಲ್ಲಿ ಬೆಳಗ್ಗೆ ೯ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಶಿಬಿರ ನಡೆಯಲಿದೆ.

ವಿವಿಧ ಆಸ್ಪತ್ರೆಯ ವೈದ್ಯರು ರೋಗಿಗಳ ತಪಾಸಣೆ ಉಚಿತವಾಗಿ ನಡೆಸಲಿದ್ದಾರೆ. ಅಗತ್ಯ ಔಷಧಿ ಕೂಡ ಉಚಿತವಾಗಿ ನೀಡಲಾಗುತ್ತದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಗ್ಗೆ ೧೧.೩೦ ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ.ರಾಜೇಂದ್ರ, ಭಾರತೀಯ ವಿದ್ಯಾಭವನ ಕೊಡಗು ಕೇಂದ್ರ ಅಧ್ಯಕ್ಷ ಕೆ.ಎಸ್. ದೇವಯ್ಯ ಉದ್ಘಾಟಿಸಲಿದ್ದಾರೆ.

ಮುಖ್ಯಅತಿಥಿಗಳಾಗಿ ಅಶ್ವಿನಿ ಆಸ್ಪತ್ರೆ ವಿಶ್ವಸ್ಥರಾದ ಎಂ.ಸಿ. ಗೋಖಲೆ, ಕಾರ್ಯದರ್ಶಿ ಕುಪ್ಪಂಡ ರಾಜಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಬೆಳ್ಳಿ ಮಹೋತ್ಸವ ಆರೋಗ್ಯ ಸಮಿತಿ ಸದಸ್ಯ ಎಂ.ಅಬ್ದುಲ್ಲಾ, ವಾಕ್ ಮತ್ತು ಶ್ರವಣ ಇನ್‌ಪ್ಲಾಂಟ್ ಕ್ಲಿನಿಕ್ ಸಮನ್ವಯಕಾರ ಜೇರುಸ್ ಥಾಮಸ್ ಅಲೆಗ್ಸಾಂಡರ್ ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net