ಮಡಿಕೇರಿ ನಗರಸಭೆ ಆಡಳಿತ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

RAJESH B.Y
Published on

ಮಡಿಕೇರಿ: ನಗರಸಭಾ ಆಡಳಿತ ವ್ಯವಸ್ಥೆ ಅಭಿವೃದ್ಧಿ ಕಾರ್ಯನಿರ್ಲಕ್ಷಿಸಿದೆ ಮತ್ತು ಸಾರ್ವಜನಿಕರ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಧೋರಣೆ ಖಂಡಿಸಿ ಸೆ.೧೨ ರಂದು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಹೇಳಿದ್ದಾರೆ.

ನಗರದಲ್ಲಿ ಅಭಿವೃದ್ಧಿ ಕಾರ್ಯ ನಿಂತ ನೀರಾಗಿದೆ. ಯಾವುದೇ ಅರ್ಜಿಗಳು ಸಕಾಲದಲ್ಲಿ ವಿಲೇವಾರಿಯಾಗದೆ ಜನರು ತೊಂದರೆ ಅನುಭವಿ ಸುತ್ತಿದ್ದಾರೆಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಖಾತೆ ವರ್ಗವಣೆ, ಫಾರ್ಮ್ ನಂಬರ್ ೩ ಸೇರಿದಂತೆ ವಿವಿಧ ಅರ್ಜಿಗಳನ್ನು ವಿಲೇವಾರಿ ಮಾಡದೆ ಸತಾಯಿಸಲಾಗುತ್ತಿದೆ. ನಗರಕ್ಕೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ. ಸ್ವಚ್ಛತೆ ಆದ್ಯತೆ ನೀಡುತ್ತಿಲ್ಲ, ನಗರದಲ್ಲಿರುವ ಸುಲಭ್ ಶೌಚಾಲಯಗಳು ನಿರ್ವಹಣೆ ಇಲ್ಲದೆ ದುರ್ನಾತ ಬೀರುತ್ತಿವೆ.

ನಗರದ ಹೃದಯ ಭಾಗವಾದ ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯಲ್ಲಿ ನೂರಾರು ಪ್ರಯಾಣಿಕರು ಬಸ್‌ಗಳಿಗಾಗಿ ಕಾದು ನಿಲ್ಲುತ್ತಾರೆ. ಸುಸಜ್ಜಿತ ಬಸ್ ತಂಗುದಾಣ, ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ನಗರಸಭೆ ಫಲವಾಗಿದೆ.

ತರಕಾರಿ ಮತ್ತು ಮಾಂಸದ ಮಾರುಕಟ್ಟೆ ಮೂಲಭೂತ ಸೌಲಭ್ಯಗಳಿಲ್ಲದೆ ಅಶುಚಿತ್ವದಿಂದ ಕೂಡಿದೆ. ಮಾಂಸ ಮಾಡುವ ಪ್ರದೇಶವನ್ನು ವೈಜ್ಞಾನಿಕವಾಗಿ ಸುಸಜ್ಜಿತಗೊಳಿಸದೆ ನಿರ್ಲಕ್ಷಿಸಲಾಗಿದೆ. ನೂತನ ಖಾಸಗಿ ಬಸ್ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯ ಒದಗಿಸದೆ ನಿರ್ಲಕ್ಷಿಸ ಲಾಗಿದೆ.

ನಗರದಲ್ಲಿರುವ ಉದ್ಯಾನ ಕಾಡು ಸೇರಿವೆ. ಚರಂಡಿ ಮತ್ತು ತೋಡು ತುಂಬಾ ಹೂಳು ತುಂಬಿದ್ದು, ಸಣ್ಣ ಮಳೆಗೂ ಪ್ರವಾಹದಂತೆ ನೀರು ಹರಿದು ಮನೆಗಳಿಗೆ ನುಗ್ಗುತ್ತಿದೆ. ಆದರೂ ನಗರಸಭೆ ಸ್ವಚ್ಛತಾ ಕಾರ್ಯ ಕೈಗೊಂಡಿಲ್ಲ. ನಗರದಲ್ಲಿ ಸಂಗ್ರಹವಾದ ಕಸವನ್ನು ಅವೈಜ್ಞಾನಿಕ ವಾಗಿ ವಿಲೇವಾರಿ ಮಾಡಲಾಗುತ್ತಿದ್ದು, ಇಲ್ಲಿಯವರೆಗೆ ಜಾಗ ಗುರುತಿಸಿ ವೈಜ್ಞಾನಿಕ ರೂಪ ನೀಡುವ ಕಾರ್ಯ ಮಾಡಿಲ್ಲ ಎಂದು ರಾಜೇಶ್ ಆರೋಪಿಸಿದ್ದಾರೆ.

ಸೋಮವಾರ ಬೆಳಗ್ಗೆ ೧೦ ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ನಗರಸಭಾ ಕಚೇರಿಗೆ ಮುತ್ತಿ
ಗೆ ಹಾಕುವುದಾಗಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net