ಮಡಿಕೇರಿ ಕ್ಷೇತ್ರದ ಎಂಎಲ್‌ಎ ಟಿಕೆಟ್‌ಗೆ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ ಹರಪಳ್ಳಿ ರವೀಂದ್ರ

15mdkn5 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕರ್ನಾಟಕ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.

೨ ಲಕ್ಷ ರೂಪಾಯಿ ಶುಲ್ಕದೊಂದಿಗೆ ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್ ಬಳಿ ಅರ್ಜಿ ಸಲ್ಲಿಸಿದ್ದಾರೆ. ೨೦೧೬ ರಲ್ಲಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದು, ಇತ್ತೀಚೆಗೆ ಆನ್‌ಲೈನ್ ಮೂಲಕ ನಡೆದಿದ್ದ ಸದಸ್ಯತ್ವ ಆಂದೋಲನ ಸಂದರ್ಭದಲ್ಲಿಯೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದರು.

ಕಾಂಗ್ರೆಸ್ ವರಿಷ್ಠರು ನನಗೆ ಟಿಕೆಟ್ ನೀಡುವ ವಿಶ್ವಾಸ ಹೊಂದಿದ್ದೇನೆ. ಕಳೆದೆರಡು ದಶಕದಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ಜನಪರ ಕೆಲಸ ಮಾಡುತ್ತಾ ಬಂದಿದ್ದೇನೆ. ತನ್ನ ಸ್ವಂತ ದುಡಿಮೆಯಲ್ಲಿ ನನ್ನಿಂದ ಆಗುವಷ್ಟು ಜನರಿಗೆ ನೆರವು ನೀಡುತ್ತಾ ಬಂದಿದ್ದೇನೆ. ವಿದ್ಯಾರ್ಥಿಗಳಿಗೆ ಉಚಿತ ವಾಗಿ ನೋಟ್ ಪುಸ್ತಕ ನೀಡುತ್ತಾ ಬಂದಿದ್ದೇನೆ. ಕ್ಷೇತ್ರದ ಬಹುತೇಕ ಜನರಿಗೆ ನನ್ನ ವೈಯುಕ್ತಿಕ ಪರಿಚಯ ಇದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಶಾಸಕನಾಗಿ ಆಯ್ಕೆಯಾದ ಮೇಲೆ ಸ್ವಾರ್ಥ ಮನೋಭಾವದಿಂದ ವರ್ತಿಸುವುದಿಲ್ಲ. ಕ್ಷೇತ್ರದಲ್ಲಿ ಆಗಬೇಕಾಗಿರುವ ಕೆಲಸ ಕಾರ್ಯಗಳು ಹಾಗೂ ಕುಂದುಕೊರತೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹರಪಳ್ಳಿ ರವೀಂದ್ರ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net