

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಜನೋತ್ಸವ ಮಡಿಕೇರಿ ದಸರಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗಿದೆ. ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ನೇತೃತ್ವದ ನಿಯೋಗ ಬುಧವಾರ ಬೆಂಗಳೂರಿನಲ್ಲಿ ಶಾಸಕದ್ವಯರ ಸಮ್ಮುಖದಲ್ಲಿ ಸಿಎಂ ಭೇಟಿ ಮಾಡಿ ಆಹ್ವಾನಿಸಿದರು.
ವಿಜಯದಶಮಿಯಂದು ನಡೆಯಲಿರುವ ದಶಮಂಟಪ ಶೋಭಾಯಾತ್ರೆ ವೀಕ್ಷಿಸಲು ಆಗಮಿಸುವಂತೆ ಮುಖ್ಯಮಂತ್ರಿಯನ್ನು ಆಹ್ವಾನಿಸ ಲಾಗಿದೆ ಅಧ್ಯಕ್ಷೆ ಅನಿತಾ ಪೂವಯ್ಯ ವಿಜಯವಾಣಿಗೆ ಮಾಹಿತಿ ನೀಡಿದ್ದಾರೆ. ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರನ್ನೂ ಕೂಡ ಆಹ್ವಾನಿಸಲಾಗಿದೆ.
ಮಡಿಕೇರಿ ದಸರಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಸಿಎಂಗೆ ಕೋರಿಕೆ ಸಲ್ಲಿಸಿಲ್ಲ. ಸಿಎಂ ಗಮನ ಸೆಳೆಯುವುದರ ಮೂಲಕ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿಸುವ ಭರವಸೆಯನ್ನು ಉಸ್ತುವಾರಿ ಸಚಿವರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಹೆಚ್ಚುವರಿ ಅನುದಾನ ಕೇಳಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಮಡಿಕೇರಿ ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್. ರಮೇಶ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಚಿ ಶ್ವೇತಾ ಪ್ರಶಾಂತ್, ಉಪಾಧ್ಯಕ್ಷ ಡಿಶು, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಬಿ.ಎಂ. ಹರೀಶ್ ಇದ್ದರು.