ಮಡಿಕೇರಿ ಕಾಳಜಿ ಕೇಂದ್ರಕ್ಕೆ ಡಿಸಿ ಭೇಟಿ

8mdka5 - Copy
Published on

ಮಡಿಕೇರಿ: ಮಡಿಕೇರಿಯಲ್ಲಿರುವ ರೆಡ್ ಕ್ರಾಸ್ ಭವನದ ಕಾಳಜಿ ಕೇಂದ್ರಕ್ಕೆ ಸೋಮವಾರ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಭೇಟಿ ನೀಡಿ ಪರಿಶೀಲಿಸಿದರು.

೨ನೇ ಮೊಣ್ಣಂಗೇರಿ ಗ್ರಾಮದ ೩೫ ಕುಟುಂಬದ ೮೮ ಜನ ಆಶ್ರಯ ಪಡೆದಿದ್ದಾರೆ. ಅವರಿಗೆ ಮೊಟ್ಟೆ ಸೇರಿದಂತೆ ಅಗತ್ಯ ಪೌಷ್ಟಿ ಆಹಾರ ನೀಡುವಂತೆ ಸೂಚಿಸಿದರು. ಮಕ್ಕಳಿಗೆ ಹಾಲು, ಬಿಸ್ಕೇಟ್, ಮೊಟ್ಟೆಯನ್ನು ಸರ್ಕಾರದ ಮೆನು ಮಾದರಿಯಲ್ಲಿ ಊಟ ಪೂರೈಸುವಂತೆ ತಹಸೀಲ್ದಾರ್‌ಗೆ ನಿರ್ದೇಶನ ನೀಡಿದರು.

ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರಿಗೆ ಪ್ರತಿದಿನವೂ ಸಮಯಕ್ಕೆ ಸರಿಯಾಗಿ ಆಹಾರ ನೀಡಲಾಗುತ್ತದೆ. ವಯೋವೃದ್ದರು, ಗರ್ಭಿಣಿಯರು ಮತ್ತು ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತದೆ. ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಎಲ್ಲಾ ಅಗತ್ಯ ಸೌಲಭ್ಯ ಒದಗಿಸುವುದೆಂದರು. ಸಂತ್ರಸ್ತರಿಗೆ ರೋಗ ನಿಯಂತ್ರಣ, ಶುಚಿತ್ವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ವೈದ್ಯಕೀಯ ಸಿಬ್ಬಂದಿ ಅರಿವು ಮೂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net