ವಿಶ್ವ ವಿದ್ಯಾನಿಲಯಕ್ಕೆ ೩ನೇ ರ‌್ಯಾಂಕ್ ಪಡೆದ ಡಾ.ಸಂಹಿತಾ ಎಸ್. ಹೆಗಡೆ

dr.samhitha
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ಮೂಲಕ ನಡೆದ ಎಂಎಸ್ ಪರೀಕ್ಷೆಯಲ್ಲಿ ಮಡಿಕೇರಿಯ ವೈದ್ಯೆ ಡಾ.ಸಂಹಿತಾ ಎಸ್. ಹೆಗಡೆ ವಿಶ್ವವಿದ್ಯಾನಿಲಯಕ್ಕೆ ೩ನೇ ರ‌್ಯಾಂಕ್ ಪಡೆದಿದ್ದಾರೆ.

ಮೈಸೂರಿನ ಜೆಎಸ್‌ಎಸ್ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಇವರಿಗೆ ನ.೪ ರಂದು ಆಯೋಜಿಸಿದ್ದ ಘಟಿಕೋತ್ಸವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಪಡೆದ ಹಿನ್ನಲೆಯಲ್ಲಿ ಆಯುರ್ ವಿಶಾರದ ಎಂಬ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರಿಗೆ ಕಾಲೇಜಿನ ಅತ್ಯುತ್ತಮ ವಿದ್ಯಾರ್ಥಿನಿ ಎಂಬ ಪ್ರಶಸ್ತಿ ಕೂಡ ಲಭಿಸಿದೆ. ಪ್ರಥಮ ವರ್ಷದಿಂದ ಅಂತಿಮ ವರ್ಷದವರೆಗೆ ವಿಶ್ವವಿದ್ಯಾನಿಲಯಕ್ಕೆ ಓವರ್ ಆಲ್ ಸಾಧನೆಗೆ ೬ನೇ ರ‌್ಯಾಂಕ್ ಮತ್ತು ೮ ವಿಷಯಗಳಲ್ಲಿ ವಿಶ್ವವಿದ್ಯಾನಿಲಯಕ್ಕೆ ರಾಂಕ್ ಗಳಿಸಿ ಸಾಧನೆ ಮಾಡಿದ್ದಾರೆ.

ಇವರು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ.ಶ್ರೀಧರ್ ಆರ್. ಹೆಗಡೆ- ಸಂತ ಜೋಸೆಫ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ನೀತಾ ಎಸ್. ಹೆಗಡೆ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net