

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಬುಧವಾರ ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕ ಭವನ ಆವರಣದಲ್ಲಿನ ಯುದ್ಧ ಸ್ಮಾರಕದಲ್ಲಿ ನಡೆಯಿತು.
ಮಹಾವೀರ ಚಕ್ರ ಪುರಸ್ಕೃತ ನಿವೃತ್ತ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪಿ.ಎಸ್. ಗಣಪತಿ, ಏರ್ ಮಾರ್ಷಲ್‌ಕೆ.ಸಿ. ನಂದ ಕಾರ್ಯಪ್ಪ, ಲೆಫ್ಟಿನೆಂಟ್ ಕರ್ನಲ್ ಚಕೊ, ಏರ್ ಕಮಾಂಡರ್ ಕಂಬಿರಂಡ ದೇವಯ್ಯ, ಕರ್ನಲ್ ಎಂ.ನಾಚಪ್ಪ, ಕರ್ನಲ್ ಕೊಡಂದೇರ ಉತ್ತಯ್ಯ, ಗ್ರೂಫ್ ಕ್ಯಾಪ್ಟನ್ ಕಾರ್ಯಪ್ಪ, ಸುಬೇದಾರ್ ಸುಬ್ಬಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಸೈನಿಕ ಮಂಡಳಿ ಉಪಾಧ್ಯಕ್ಷ ಮೇಜರ್‌ಒ.ಎಸ್.ಚಿಂಗಪ್ಪ, ತಹಸೀಲ್ದಾರ್ ಪಿ.ಎಸ್. ಮಹೇಶ್, ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷ ಪ್ರಸಾದ್ ಗೌಡ, ರೋಟರಿ ಪಬ್ಲಿಕ್ ಇಮೇಜ್ ಅಧ್ಯಕ್ಷ ಎಚ್.ಟಿ. ಅನಿಲ್, ಕೊಡವ ಮಕ್ಕಡ ಕೂಟ ಅಧ್ಯಕ್ಷ ಬೊಳ್ಳಜ್ಜೀರ ಬಿ. ಅಯ್ಯಪ್ಪ, ಸೈನಿಕ ಕಲ್ಯಾಣ ಇಲಾಖೆಯ ವಿಘ್ನೇಶ್ವರ್ ಗೌರವ ನಮನ ಸಲ್ಲಿಸಿದರು.
ಪೊಲೀಸ್ ಇಲಾಖೆುಂದ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಿ, ಮೌನಾಚರಿಸಲಾಯಿತು. ಲೆಫ್ಟಿನೆಂಟ್ ಕರ್ನಲ್ ಪಿ.ಎಸ್. ಗಣಪತಿ ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಿದರು. ಪೊಲೀಸ್ ಇಲಾಖೆಯ ಆರ್‌ಎಫ್‌ಐ ದೇವಯ್ಯ ಅವರು ಗೌರವ ವಂದನೆ ನಡೆಸಿಕೊಟ್ಟರು. ಪೊಲೀಸ್ ಬ್ಯಾಂಡ್ ನೇತೃತ್ವ ವಹಿಸಿದ್ದ ಸಿದ್ದೇಶ್ ತಂಡದವರು ಪೊಲೀಸ್ ವಾದ್ಯದೊಂದಿಗೆ ಗೌರವ ಸಲ್ಲಿಸಿದರು. ಮಾಜಿ ಸೈನಿಕರು, ಪೊಲೀಸರು, ಎನ್‌ಸಿಸಿ ವಿದ್ಯಾರ್ಥಿಗಳು ಇತರರು ಗೌರವ ಸಲ್ಲಿಸಿದರು.