ಮಡಿಕೇರಿಯಲ್ಲಿ ಗಮನ ಸೆಳೆದ ರಾಜ್ಯಮಟ್ಟದ ಜಾನಪದ- ಬುಡಕಟ್ಟು ನೃತ್ಯ

20mdkj3 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಕೊಡಗು ಜಿಲ್ಲೆ ಪ್ರಾಚೀನ ಸಾಂಸ್ಕೃತಿಕ ಹಿನ್ನೆಲೆ ಹೊಂದಿದೆ. ಇಲ್ಲಿನ ಜಾನಪದೀಯ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕೆಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ ಕರೆ ನೀಡಿದರು.

ಕಾಲೇಜು ಶಿಕ್ಷಣ ಇಲಾಖೆ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಐನ್‌ಮನೆ ಕೆಫೆ ಸಹಕಾರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ಜಾನಪದ/ ಬುಡಕಟ್ಟು ನೃತ್ಯ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಕೊಡವ ಉಮ್ಮತ್ತಾಟ್, ಬೊಳಕಾಟ್, ಕೋಲಾಟ್, ಕತ್ತಿಯಾಟ್ ಸೇರಿದ್ದಂತೆ ಜಾನಪದ ನೃತ್ಯಗಳನ್ನೊಳಗೊಂಡ ಪ್ರಾಚೀನ ಸಂಸ್ಕೃತಿ, ಕಲೆ ಸಂರಕ್ಷಿಸುವ ನಿಟ್ಟಿನಲ್ಲಿ ಅಕಾಡೆಮಿ ಅಧ್ಯಕ್ಷನಾಗಿದ್ದ ಸಂದರ್ಭ ಪ್ರಯತ್ನಿಸಿದ್ದೆ. ಕೊಡಗಿನ ಉದ್ದಗಲಕ್ಕೂ ೫೨ ಕ್ಕೂ ಹೆಚ್ಚು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತೆಂದರು.

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ನಿರ್ಮಲ ಮಾತನಾಡಿದರು. ಐನ್‌ಮನೆ ಕೆಫೆಯ ಮಾಲೀಕ ತಮ್ಮು ಪೂವಯ್ಯ, ತೀರ್ಪುಗಾರರಾದ ಪೂರ್ಣಿಮಾ, ಮೇಘ, ಅನಿಲ್ ಕುಮಾರ್ ಮತ್ತಿತರರು ಇದ್ದರು.

ಜಾನಪದ ಹಾಗೂ ಬುಡಕಟ್ಟು ನೃತ್ಯ ಸ್ಪರ್ಧೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕುಸುಮ ನಿರೂಪಿಸಿದರು. ಶಿವಕುಮಾರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net