ನಾಳೆಯಿಂದ ಹಿಂದು ಕ್ರಿಕೆಟ್ ಕಪ್ 2020

logo
Published on

ಮಡಿಕೇರಿ: ಮಡಿಕೇರಿ ಹಿಂದು ಕ್ರಿಕೆಟ್ ಕ್ಲಬ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜ.18 ಹಾಗೂ 19 ರಂದು ‘ಹಿಂದು ಕ್ರಿಕೆಟ್ ಕಪ್ 2020’ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕ್ಲಬ್‌ನ ಸದಸ್ಯ ವಿನಯ್ ತಿಳಿಸಿದರು.
18 ರಂದು ವಕೀಲ ಎಂ.ಇ.ಮೋಹನ್‌ಕುಮಾರ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಕ್ಕೆ 2000 ರೂ. ಮೈದಾನ ಶುಲ್ಕ ನಿಗದಿಪಡಿಸಲಾಗಿದೆ. ವಿಜೇತ ತಂಡಕ್ಕೆ ಪ್ರಥಮ 33,333 ರೂ. ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ 22,222 ರೂ. ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಬಹುಮಾನವಾಗಿ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
19 ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ವಿಜೇತರಿಗೆ ಪ್ರಶಸ್ತಿ ವಿತರಿಸಲಾಗುವುದು. ಜಿಲ್ಲೆ ಹಾಗೂ ಹೊರ ಜಿಲ್ಲೆಯಿಂದ 40ಕ್ಕೂ ಅಧಿಕ ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೆಚ್ಚಿನ ಮಾಹಿತಿಗಾಗಿ ಪವನ್-9880490536, ವಿನಯ್-9900612664 ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು. ಮಡಿಕೇರಿಯ ಹಿಂದು ಕ್ರಿಕೆಟ್ ಕ್ಲಬ್ ಸದಸ್ಯರಾದ ಸಂದೀಪ್, ಕುಮಾರ್, ಶಿವಮೂರ್ತಿ, ಪವನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net