

ಮಡಿಕೇರಿ: ಸಾಂಪ್ರದಾಯಿಕ ಪೂಜೆಯೊಂದಿಗೆ ಮಡಿಕೇರಿ ಜನೋತ್ಸವ ದಸರಾ ಆಚರಣೆಗೆ ಸೋಮವಾರ ಚಾಲನೆ ನೀಡಲಾಯಿತು.
ಮಡಿಕೇರಿ ಪೇಟೆ ಶ್ರೀ ರಾಮ ಮಂದಿರದಲ್ಲಿ ದಸರಾ ಸಮಿತಿ ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್.ರಮೇಶ್, ಈ ಬಾರಿ ವಿಜೃಂಭಣೆಯಿಂದ ದಸರಾ ಹಬ್ಬವನ್ನು ಆಚರಿಸಲಾಗುವುದು. ಸರ್ಕಾರ ೧ ಕೋಟಿ ರೂಪಾಯಿ ಅನುದಾನ ನೀಡಿದ್ದು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಸರಾ ಸಮಿತಿ ಅಧ್ಯಕ್ಷೆ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಎಲ್ಲಪ್ಪ, ಖಜಾಂಜಿ ಶ್ವೇತಾ ಪ್ರಶಾಂತ್, ದಶ ಮಂಟಪ ಸಮಿತಿ ಅಧ್ಯಕ್ಷ ಮನು ಮಂಜುನಾಥ್, ನಗರಸಭೆ ಸದಸ್ಯ ಮಹೇಶ್ ಜೈನಿ ಸೇರಿದಂತೆ ನಗರಸಭೆ ಸದಸ್ಯರು, ದಸರಾ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.