

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಸಂಭವನೀಯ ಅಭ್ಯರ್ಥಿ ನಾಪಂಡ ಮುತ್ತಪ್ಪ ಪರ ಬಿರುಸಿನ ಪ್ರಚಾರ ನಡೆಯು ತ್ತಿದೆ. ಸೋಮವಾರಪೇಟೆ, ಕುಶಾಲನಗರ, ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ನಾಪಂಡ ಎಂ. ಮುತ್ತಪ್ಪ ಬೆಂಬಲಿಗರು ಮನೆ-ಮನೆಗೆ ಭೇಟಿ ನೀಡುವುದರ ಮೂಲಕ ಮತ ಪ್ರಚಾರ ಪ್ರಾರಂಭಿಸಿದ್ದಾರೆ.
ನಾಪಂಡ ಮುತ್ತಪ್ಪ ಅವರ ಪರಿಚಯ ಪುಸ್ತಕವನ್ನು ಜೆಡಿಎಸ್ ಕಾರ್ಯಕರ್ತರು- ಬೆಂಬಲಿಗರು ಮನೆ- ಮನೆಗೆ ಖುದ್ದು ಭೇಟಿ ಮಾಡಿ ತಲುಪಿ ಸುತ್ತಿದ್ದಾರೆ. ರೈತ ಪರ, ಜನಪರ ನಿಲುವು ಹೊಂದಿರುವ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಯಾಗಲು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಲಾಗುತ್ತಿದೆ.
ಹಲವು ದಶಕದಿಂದ ಕಾರ್ಮಿಕ ಹೋರಾಟದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ನಾಪಂಡ ಮುತ್ತಪ್ಪ ಸಮಾಜ ಸೇವಕರಾಗಿ ಸಮಾಜಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಆಯ್ಕೆ ಮಾಡುವುದರ ಮೂಲಕ ಮತ್ತಷ್ಟು ಜನಪರ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಗುತ್ತಿದೆ.