

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಜಾತ್ಯಾತೀತ ಜನತಾದಳ ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಂಭವನೀಯ ಅಭ್ಯರ್ಥಿ ನಾಪಂಡ ಎಂ. ಮುತ್ತಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡುವುದರ ಮೂಲಕ ಜನಮನ ಸೆಳೆಯುವ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ.
ಸೋಮವಾರಪೇಟೆ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡುವುದರ ಮೂಲಕ ಜೆಡಿಎಸ್ ಕಾರ್ಯಕರ್ತರು, ಮತದಾರ ರೊಂದಿಗೆ ಖುದ್ದು ಮಾತುಕತೆ ನಡೆಸುತ್ತಿದ್ದಾರೆ. ಚುನಾವಣೆ ಎದುರಿಸಲು ಸಜ್ಜಾಗುವಂತೆ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದಾರೆ. ಮತದಾರರನ್ನು ಜೆಡಿಎಸ್‌ನತ್ತ ಸೆಳೆಯುವ ಕಾರ್ಯತಂತ್ರಗಳ ಕುರಿತು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮಲೋಚನೆ ನಡೆಸುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಸ್ವಂತ ಬಲದಲ್ಲಿ ಅಧಿಕಾರ ನಡೆಸಲು ಮತದಾರರು ಅವಕಾಶ ಮಾಡಿಕೊಡಬೇಕು. ತಮ್ಮ ಆಡಳಿತಾವಧಿಯಲ್ಲಿ ರೈತರ ಸಮಸ್ಯೆ ಪರಿಹರಿಸಲು ಒತ್ತು ನೀಡಲಿದ್ದಾರೆ. ಇದರೊಂದಿಗೆ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಮುತುವರ್ಜಿ ವಹಿಸಲಿದ್ದಾರೆಂದು ಮತದಾರರಿಗೆ ಮನವರಿಕೆ ಮಾಡಿಕೊಡುತ್ತಿ
ದ್ದಾರೆ.
ಆರ್ಥಿಕ ನೆರವು
ಸೋಮವಾರಪೇಟೆ ತಾಲೂಕು ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಬೆಂಕಿ ಅನಾಹುತದಿಂದ ಮನೆ ಕಳೆದುಕೊಂಡ ಕುಟುಂಬಕ್ಕೆ ನಾಪಂಡ ಎಂ. ಮುತ್ತಪ್ಪ ೨೦ ಸಾವಿರ ರೂ. ಧನಸಹಾಯ ಮಾಡಿದರು. ಯಲಕನೂರು ಕಾಟಿಕೊಪ್ಪಲು ಗ್ರಾಮದಲ್ಲಿ ಗ್ರಾಮಸ್ಥ ರೊಂದಿಗೆ ಸಂವಾದ ನಡೆಸಿದರು.