ಕೊಡಗಿಗೆ ಬರುವ ಸಚಿವರಿಗೆ ಮೊಟ್ಟೆ ಎಸೆತ

k k manjunath kumar
Published on

ಮಡಿಕೇರಿ: ಸಿದ್ದರಾಮಯ್ಯ ತೆರಳುತ್ತಿದ್ದ ಕಾರಿಗೆ ಮೊಟ್ಟೆ ಎಸೆದವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳದಿದ್ದಲ್ಲಿ ಮುಂದೆ ಕೊಡಗಿಗೆ ಬರುವ ಸಚಿವರಿಗೆ ಮೊಟ್ಟೆ ಎಸೆಯಲು ಗೊತ್ತಿದೆ ಎಂದು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್‌ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿಯಲ್ಲಿ ಬಿಜೆಪಿಯವರು ಮೊಟ್ಟೆ ಎಸೆದಿದ್ದು, ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಏನೂ ಹೇಳುತ್ತಾರೆಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವುದು ಖಂಡನೀಯ. ಬಿಜೆಪಿ ಅಪರಾಧ ರಾಜಕರಣ ಮಾಡುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ. ಜನಪ್ರತಿನಿಧಿಗಳು ಅಭಿವೃದ್ಧಿ ರಾಜಕೀಯ ಬಿಟ್ಟು, ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ. ಸಂಪತ್ ಬಗ್ಗೆ ಸುಳ್ಳು ಕಥೆ ಕಟ್ಟಲಾಗಿದೆ ಎಂದು ಟೀಕಿಸಿದರು. ಊಟ ಮಾಡಿದ ವಿಚಾರ ದೊಡ್ಡದು ಮಾಡುವುದರ ಮೂಲಕ ಶೇ.೪೦ ಕಮಿಷನ್ ದಂಧೆ ಕೊಡಗಿನಲ್ಲಿ ಯೂ ನಡೆಯುತ್ತಿದೆ. ತಮ್ಮ ಬಣ್ಣ ಬಯಲಾಗುತ್ತದೆ ಎಂದು ವಿಷಯಾಂತರ ಮಾಡಲು ಸಿದ್ದರಾಮಯ್ಯ ತೆರಳುತ್ತಿದ್ದ ಕಾರಿಗೆ ಮೊಟ್ಟೆ ಎಸೆದಿದ್ದಾರೆಂದು ದೂಷಿಸಿದರು.

ಸಚಿವ ಗೋವಿಂದ ಕಾರಜೋಳ ಕುಶಾಲನಗರಕ್ಕೆ ಭೇಟಿ ನೀಡಿದ್ದ ವೇಳೆ ಕಪ್ಪು ಬಾವುಟ ಪ್ರದರ್ಶಿಸಲು ಸಿದ್ಧತೆ ಮಾಡಿಕೊಂಡಿದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು. ಬಿಜೆಪಿಯವರನ್ನು ಏಕೆ ಪೊಲೀಸರು ವಶಕ್ಕೆ ಪಡೆದು ಕೊಂಡಿರಲಿಲ್ಲ ಎಂದು ಮಂಜುನಾಥ್‌ಕುಮಾರ್ ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net