ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ

BC-Nagesh
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಜಿಲ್ಲಾಡಳಿತ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ ನವೆಂಬರ್ ೧ ರಂದು ಬೆಳಗ್ಗೆ೦೯ ಗಂಟೆಗೆ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ, ಜಿಪಂ ಸಿಇಒ ಡಾ.ಎಸ್.ಆಕಾಶ್ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net