ಮಹಾನ್ ವ್ಯಕ್ತಿಗಳ ನಾಮಫಲಕ, ಪ್ರತಿಮೆ ಸ್ವಚ್ಛಗೊಳಿಸಿದ ಕೊಡವ ಮಕ್ಕಡ ಕೂಟ

6mdks2 - Copy
Published on

ಮಡಿಕೇರಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ನಗರದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ನಾಮಫಲಕಗಳ ಸ್ವಚ್ಛತಾ ಕಾರ್ಯ ಕೊಡವ ಮಕ್ಕಡ ಕೂಟದಿಂದ ನಡೆಯಿತು.

ಕೊಡವ ಮಕ್ಕಡ ಕೂಟ ಅಳವಡಿಸಿದ ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ ರಸ್ತೆ, ಕೊಂಗಂಡ ಗಣಪತಿ ಬೀದಿ, ಹರಿದಾಸ ಅಪ್ಪನೆರವಂಡ ಅಪ್ಪಚ್ಚಕವಿ ರಸ್ತೆ ನಾಮಫಲಕ ಶುಚಿಗೊಳಿಸಿ ಬಣ್ಣ ಬಳಿಯಲಾಯಿತು. ೧೯೬೫ರ ಯುದ್ಧದಲ್ಲಿ ವೀರ ಮರಣ ಹೊಂದಿ, ಮರಣೋತ್ತರ ಮಹಾವೀರ ಚಕ್ರ ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ ಪ್ರತಿಮೆ ಸ್ವಚ್ಛಗೊಳಿಸಿ ಆವರಣಕ್ಕೆ ಬಣ್ಣ
ಬಳಿಯಲಾಯಿತು.

ಹಿರಿಯ ಸಾಧಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಯುವ ಪೀಳಿಗೆಗೆ ಮಾದರಿಯಾಗಿರಬೇಕು ಮತ್ತು ಅವರ ಸಾಧನೆಯನ್ನು ಗುರುತಿಸುವ ಕಾರ್ಯವಾಗಬೇಕು ಎನ್ನುವ ಉದ್ದೇಶದಿಂದ ಕೊಡವ ಮಕ್ಕಡ ಕೂಟ ಇಂತಹ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದೆ ಎಂದು ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಪ್ರಧಾನ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net