ಗ್ರಂಥಾಲಯ ಲೋಕಾರ್ಪಣೆ ಮಾಡಿದ ಸೋಮಣ್ಣ

5adarshkdga2
Published on

ಮಡಿಕೇರಿ: ನಗರದ ಕೋಟೆ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಂಥಾಲಯ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು 87 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ನೂತನ ಗ್ರಂಥಾಲಯ ಸ್ಥಾಪನೆ ಮಾಡಿದ್ದು, ಓದುಗರಿಗೆ, ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯಗಳನ್ನು ನೀಡಿದೆ. ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಕೇಂದ್ರದಲ್ಲಿರುವ ಗ್ರಂಥಾಲಯವನ್ನು ಮೇಲ್ದರ್ಜೆಗೇರಿಸಿದ್ದು, ಡಿಜಿಟಲ್ ಲೈಬ್ರರಿ ಮೂಲಕ ಬೆರಳತುದಿಯಲ್ಲಿ ಎಲ್ಲಾ ರೀತಿಯ ಪುಸ್ತಕಗಳು ದೊರಕಲಿದೆ. ಚ್ಟ್ಞಠಿ ಜಿಜಜಿಠಿಚ್ಝ ಟ್ಠಚ್ಝಿಜ್ಚಿ ್ಝಜಿಚ್ಟಿಚ್ಟ.ಟ್ಟಜ ವೆಬ್‌ಸೈಟ್ ಹಾಗೂ ಇ-ಸಾರ್ವಜನಿಕ ಗ್ರಂಥಾಲಯ ಆ್ಯಪ್ ಮೂಲಕ ಒಂದೂವರೆ ಲಕ್ಷ ಪುಸ್ತಕಗಳನ್ನು ಓದಲು ಅವಕಾಶ ಕಲ್ಪಿಸಲಾಗಿದೆ. ಲಾಗಿನ್ ಆಗುವ ಮೂಲಕ ಪ್ರಯೋಜನ ಪಡೆಯಬಹುದಾಗಿದೆ ಎಂದರು.

ಮಳೆಗಾಲದಲ್ಲಿ ಸೂರು ಕಳೆದುಕೊಂಡ ನಿರಾಶ್ರಿತರಿಗೆ ಈಗಾಗಲೇ ಪುನರ್ವಸತಿ ಕಲ್ಪಿಸಿದ್ದು, ಉಳಿದ ಮನೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಹಸ್ತಾಂತರ ಮಾಡಲಾಗುವುದು. ಇನ್ಫೋಸಿಸ್ ಸಂಸ್ಥೆಯಿಂದ ಜಂಬೂರುವಿನಲ್ಲಿ ನಿರ್ಮಿಸುತ್ತಿರುವ ಮನೆಗಳು ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಮಳೆಗಾಲದ ಹಿನ್ನೆಲೆ ಎನ್‌ಡಿಆರ್‌ಎಫ್ ಪಡೆ ಜಿಲ್ಲೆಯಲ್ಲಿದೆ. ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ವಹಿಸಿದೆ. ಜನರು ಭಯಪಡಬೇಕಾಗಿಲ್ಲ. ಸರ್ಕಾರ ನಿಮ್ಮ ಜತೆಗಿದೆ ಎಂದು ಸ್ಥೈರ್ಯ ತುಂಬಿದರು.

ಕೋವಿಡ್-19 ಹಿನ್ನೆಲೆ ಇದ್ದ ಬಿಗಿ ಕ್ರಮವನ್ನು ಸಡಿಲಗೊಳಿಸುತ್ತಿದ್ದು, ಜನರು ಮುಂಜಾಗ್ರತೆಯನ್ನು ಮರೆಯಬಾರದು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದರು.

ಮೈಸೂರು-ಕೊಡಗು ಸಂಸದ, ಮಡಿಕೇರಿ ಶಾಸಕರು, ಎಂಎಲ್ಸಿಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಪಂ ಸಿಇಒ ಲಕ್ಷ್ಮೀಪ್ರಿಯ, ತಾಪಂ ಇಒ ಲಕ್ಷ್ಮೀ, ಗ್ರಂಥಾಲಯಾಧಿಕಾರಿ ಲೀಲಾವತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net