ಮಡಿಕೇರಿ ಪುರಸಭೆ ಮಾಜಿ ಅಧ್ಯಕ್ಷ ಎಂ.ಸಿ. ವಾಸುದೇವ್ ವಿಧಿವಶ

M.C. VASUDEV - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಮಡಿಕೇರಿ ಪುರಸಭೆ ಮಾಜಿ ಅಧ್ಯಕ್ಷ ಎಂ.ಸಿ. ವಾಸುದೇವ್ (೮೦) ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪುತ್ರಿ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ವಕೀಲರಾಗಿದ್ದ ವಾಸುದೇವ್ ಅವರು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು. ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನೆರವೇರಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net