ಸೌದೆ ತರಲು ಹೋಗಿದ್ದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ವಿಡಿಯೋ ವೈರಲ್​ ಮಾಡಿದ ಕಾಮುಕರು

Rape Accused
Published on

ಕೊಡಗು: ಸೌದೆ ತರಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿ ತಾಲೂಕಿನ ತಾವೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೇ ಗ್ರಾಮದ ಚಿದಾನಂದ ಹಾಗೂ ಚೇತನ್ ಎಂಬುವರನ್ನು ಬಂಧಿಸಲಾಗಿದೆ. ಸೌದೆ ತರಲು ವಿವಾಹಿತ ಮಹಿಳೆ ತೆರಳಿದ್ದಾಗ ಕಾಮುಕರಂತೆ ಆಕೆಯ ಮೇಲೆರಗಿದ್ದಾರೆ. ಚಿದಾನಂದ್ ಅತ್ಯಾಚಾರ ಮಾಡುವ ವೇಳೆ ಚೇತನ್​ ಅದನ್ನು ವಿಡಿಯೋ ರೆಕಾರ್ಡ್​ ಮಾಡಿದ್ದು, ಹೊರಗಡೆ ಹೇಳಿದ್ರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಭಯದಿಂದ ಯಾರಿಗೂ ಹೇಳದೆ ಮಹಿಳೆ ಸುಮ್ಮನಿದ್ದಳು. ಆದರೂ ಕೂಡ ಕೆಲ ದಿನಗಳ ಬಳಿಕ ಆರೋಪಿಗಳು ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಈ ವಿಚಾರ ತಿಳಿದು ಮಹಿಳೆ ದೂರು ನೀಡಿದ ಆಧಾರದ ಮೇಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net