

ಮಡಿಕೇರಿ: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷನಾಗಿ ಕಳಂಕ ರಹಿತ ಆಡಳಿತ ನಡೆಸುವುದಾಗಿ ನೂತನ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಘೋಷಿಸಿದ್ದಾರೆ.
ಮಂಡಳಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹೊತ್ತುಕೊಂಡ ಬಳಿಕ ಶನಿವಾರ ಬೆಂಗಳೂರಿನಿಂದ ಕೊಡಗಿಗೆ ಆಗಮಿಸಿದ ಅವರಿಗೆ ಆತ್ಮೀಯ ಸ್ವಾಗತ ನೀಡಿದ ಬಳಿಕ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದರು. ಇದು ನನಗೆ ಸಿಕ್ಕಿರುವ ಗೌರವವಲ್ಲ. ಕೊಡಗಿನ ಜನತೆ ಪರ ವಾಗಿ ಮಂಡಳಿ ಅಧ್ಯಕ್ಷ ಸ್ಥಾನ ನನಗೆ ನೀಡಲಾಗಿದೆ ಎಂದರು.
ಪ್ರತಿಯೊಂದು ಜೀವ ಸಂಕುಲ ಉಳಿಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಜವಾಬ್ದಾರಿ ನಿರ್ವಹಿಸಲಾಗುವುದು. ಮಂಡಳಿ ವ್ಯಾಪ್ತಿಗೆ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪರಿಸರ ಇಲಾಖೆ, ಆಯುಷ್ ಇಲಾಖೆ ಬರುತ್ತದೆ. ಪ್ರತಿಯೊಂದು ಇಲಾಖೆ ಮೂಲಕ ಜೀವ ಸಂಕುಲ ಸಂರಕ್ಷಣೆಗೆ ಒತ್ತು ನೀಡಲಾಗುವುದೆಂದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ, ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ, ಜನರಲ್ ಕೆ.ಎಸ್. ತಿಮ್ಮಯ್ಯ, ಮೇಜರ್ ಮಂಗೇರಿರ ಮುತ್ತಣ್ಣ ವೃತ್ತಗಳಿಗೆ ತೆರಳಿ ಗೌರವ ನಮನ ಸಲ್ಲಿಸಿದರು. ಕೋಟೆ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ತದನಂತರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿ ಬಿಜೆಪಿ ವತಿಯಿಂದ ರವಿ ಕಾಳಪ್ಪ ಅವರನ್ನು ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು. ಪಟಾಕಿ ಸಿಡಿಸುವುದರ ಮೂಲಕ ಮುಖಂಡರು- ಕಾರ್ಯಕರ್ತರು ಸಂಭ್ರಮಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದವರಿಗೆ ಸಹಿ ಹಂಚಲಾಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಬಿ.ಬಿ. ಭಾರತೀಶ್, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಂಗೀರ ಅಶ್ವಿನ್ ಸತೀಶ್, ಮಡಿಕೇರಿ ನಗರಾಧ್ಯಕ್ಷ ಮನು ಮಂಜುನಾಥ್, ಜಿಲ್ಲಾ ವಕ್ತಾರ ಮಹೇಶ್ ಜೈನಿ ಮತ್ತಿತರರು ಇದ್ದರು.
ಸಾಂಪ್ರದಾಯಿಕ ಸ್ವಾಗತ
ಮಕ್ಕಂದೂರು ಕೊಡವ ಸಮಾಜ, ಮಕ್ಕಂದೂರು ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್, ವ್ಯಾಲಿ ಡ್ಯೂ ಅಸೋಸಿಯೇಷನ್, ಮೇಘತ್ತಾಳು ಗ್ರಾಮಸ್ಥರು ಬಿಗ್ ಕೆಫೆ ಬಳಿಕ ರವಿ ಕಾಳಪ್ಪ ಅವರನ್ನು ಕೊಡವ ಸಂಪ್ರದಾಯದಂತೆ ಸ್ವಾಗತಿಸಲಾಯಿತು. ಕೊಡವ ಸಾಂಪ್ರದಾಯಿಕ ಉಡುಗೆ- ತೊಡುಗೆಯಲ್ಲಿದ್ದ ಕೊಡವರು ದುಡಿಕೊಟ್ಟ್ ಪಾಟ್‌ನೊಂದಿಗೆ ಮೈಸೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಮೆರವಣಿಗೆ ಮೂಲಕ ಕರೆದುಕೊಂಡು ಬಂದರು.
ಮಕ್ಕಂದೂರು ಕೊಡವ ಸಮಾಜ ಅಧ್ಯಕ್ಷ ತಂಬುಕುತ್ತೀರ ಮಧು, ಮುಕ್ಕೋಡ್ಲು ವ್ಯಾಲಿ ಡ್ಯೂ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟೀರ ಮನು ಮುದ್ದಪ್ಪ ನೇತೃತ್ವದಲ್ಲಿ ಆತ್ಮೀಯ ಸ್ವಾಗರ ಕೋರಲಾಯಿತು. ಮಕ್ಕಂದೂರು ಕೊಡವ ಸಮಾಜಕ್ಕೆ ಸೇರಿದ ಕೊಡವ ಪುರುಷ- ಮಹಿಳೆ ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ತಮ್ಮೂರಿನ ವ್ಯಕ್ತಿ ಮಂಡಳಿ ಅಧ್ಯಕ್ಷ ಸ್ಥಾನ ಅಲಂಕರಿಸಿರುವುದಕ್ಕೆ ಸಡಗರ- ಸಂಭ್ರಮ ದಲ್ಲಿದ್ದರು.
ಮಡಿಕೇರಿ ಸಮಾಜ ಸ್ವಾಗತ