

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಶ್ರೀ ಓಂಕಾರೇಶ್ವರ ದೇವಾಲಯ ಸಮಿತಿ ಆಡಳಿತಾಧಿಕಾರಿಯಾಗಿ ಮಡಿಕೇರಿ ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್ ಪಿ.ಎಸ್. ದೇವರಾಜ್ ಶನಿವಾರ ಅಧಿಕಾರ ಸ್ವೀಕರಿಸಿದರು. ಭಾಗಮಂಡಲ- ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಅಧಿಕಾರ ಹಸ್ತಾಂತರಿಸಿದರು.
ಶಿರಸ್ತೇದಾರ್ ಹಾಗೂ ದೇವಾಲಯ ಆಡಳಿತಾಧಿಕಾರಿ ಎರಡೂ ಹುದ್ದೆ ನಿರ್ವಹಿಸಲಿದ್ದಾರೆ. ಶ್ರೀ ಓಂಕಾರೇಶ್ವರ ದೇವಾಲಯ ಕಾರ್ಯ ವ್ಯಾಪ್ತಯಲ್ಲಿ ಕೋಟೆ ಶ್ರೀ ಮಹಾಗಣಪತಿ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳಿವೆ.