ಕೊಡವ ಭಾಷೆಗೂ ಮಾನ್ಯತೆ ನೀಡಿ

prathik ponnanna
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ರಾಜ್ಯದಲ್ಲಿ ಕನ್ನಡ ಭಾಷೆಯೊಂದಿಗೆ ಕೊಡವ ಭಾಷೆಗೂ ಹೆಚ್ಚಿನ ಮಾನ್ಯತೆ ನೀಡುವ ಮೂಲಕ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ಕೊಡವಪರ ಹೋರಾಟಗಾರ ಪ್ರತೀಕ್ ಪೊನ್ನಣ್ಣ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಕರ್ನಾಟಕದಲ್ಲಿ ಕನ್ನಡವೇ ಸುಪ್ರೀಂ ಭಾಷೆ ಎಂದು ಹೇಳಿಕೆ ನೀಡಿ ದ್ದಾರೆ. ನಮಗೆ ಕನ್ನಡ ಭಾಷೆ ಬಗ್ಗೆ ಅಪಾರ ಗೌರವ, ಅಭಿಮಾನವಿದೆ. ಆದರೆ, ಕರ್ನಾಟಕದಲ್ಲಿ ಕನ್ನಡವೇ ಸುಪ್ರೀಂ ಎನ್ನುವುದರಿಂದ ಉಳಿದ ಭಾಷೆಗಳಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಜ್ಯದಲ್ಲಿ ಕನ್ನಡಿಗರು ಮಾತ್ರ ತೆರಿಗೆ ಕಟ್ಟುತ್ತಿಲ್ಲ. ಕೊಡವರೂ ಸೇರಿದಂತೆ ಎಲ್ಲಾ ಭಾಷೆ, ಜನಾಂಗದವರು ತೆರಿಗೆ ಪಾವತಿಸುತ್ತಿದ್ದಾರೆ. ಕನ್ನಡವೇ ಸುಪ್ರೀಂ ಭಾಷೆ ಎಂದು ಯಾವ ಕಾನೂನು, ಸಂವಿಧಾನದಲ್ಲಿ ಇದೆ ಎಂಬುದನ್ನು ಸಚಿವರು ಸಾಬೀತುಪಡಿಸಲಿ. ಕನ್ನಡ ಭಾಷೆಯೊಂದಿಗೆ ಕೊಡವ ಮತ್ತು ತುಳು ಭಾಷೆಯನ್ನೂ ಕಡ್ಡಾಯಗೊಳಿಸುವ ಮೂಲಕ ರಾಜ್ಯ ಭಾಷೆಯನ್ನಾಗಿ ಮಾಡುವಂತೆ ಮನವಿ ಮಾಡಿದರು.

ಕನ್ನಡ ಭಾಷೆಯೊಂದಿಗೆ ಕೊಡವ ಭಾಷೆಗೂ ಹೆಚ್ಚಿನ ಮಾನ್ಯತೆ ನೀಡುವ ಮೂಲಕ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇವೆ. ಅವರಿಂದ ಸಕಾರಾತ್ಮಕ ಸ್ಪಂದನೆ ಸಿಗುವ ಭರವಸೆ ಇದೆ. ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಅಧಿಕಾರ ರಾಷ್ಟ್ರಪತಿಗೆ ಇದ್ದು, ಅವರಿಗೂ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net