ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯಗೆ ಸನ್ಮಾನ

26mdkj2 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಸನ್ಮಾನಿಸಿದರು.

ಕೊಡಗು ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ೭೪ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕಿ ಜನಪದ ಕಲಾವಿದೆಯನ್ನು ಗೌರವದಿಂದ ಸನ್ಮಾನಿಸಲಾಯಿತು.

ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ.ಎಸ್. ಆಕಾಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net