ಪ್ರಕೃತಿ ವಿಕೋಪಕ್ಕೆ ಯಾರೂ ಹೊಣೆಯಲ್ಲ

9mdka3 - Copy
Published on

ಮಡಿಕೇರಿ: ಪ್ರಾಕೃತಿಕ ವಿಕೋಪಕ್ಕೆ ಯಾರು ಹೊಣೆಯಲ್ಲ. ಪ್ರಕೃತಿ ವಿಕೋಪದಿಂದ ಎದುರಾಗುವ ಪ್ರತಿಕೂಲ ಪರಿಸ್ಥಿತಿಯನ್ನು ಎಲ್ಲರೂ ಸೇರಿ ಎದುರಿಸ ಬೇಕೆಂದು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಮಂಗಳವಾರ ಸಂಪಾಜೆ ಬಳಿಯ ಕಿಂಡಿ ಅಣೆಕಟ್ಟು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಕೃತಿ ವಿಕೋಪದಿಂದ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ್ದಂತೆ ಇದುವರೆಗೂ ಯಾವ ನಷ್ಟವುಂಟಾಗಿಲ್ಲ. ಸಣ್ಣ ನೀರಾವರಿ ಇಲಾಖೆಯಿಂದ ಸಂಪಾಜೆ ಹೋಬಳಿ ವ್ಯಾಪ್ತಿಯಲ್ಲಿ ನಾಲ್ಕು ಕಿರು ಅಣೆಕಟ್ಟು ನಿರ್ಮಿಸಲಾಗಿದ್ದು, ಕಿರು ಅಣೆಕಟ್ಟಿನಿಂದ ತೊಂದರೆಯಾಗಿಲ್ಲ ಎಂದು ಸಚಿವರು ಸ್ಪಷ್ಟ ಪಡಿಸಿದರು.

ಗುಡ್ಡ ಕುಸಿದು, ಧರೆಗುರುಳಿದ ಮರಗಳು ಕಿರು ಅಣೆಕಟ್ಟೆಯಲ್ಲಿ ಸಿಲುಕಿಕೊಂಡು ಸಮಸ್ಯೆಯಾಗಿದೆ. ಅರಣ್ಯ ಇಲಾಖೆ ಮರಗಳನ್ನು ತೆರವು ಗೊಳಿಸುವುದರ ಮೂಲಕ ಸಮಸ್ಯೆ ಪರಿಹರಿಸಿದೆ. ಕಿರು ಅಣೆಕಟ್ಟೆಯಲ್ಲಿ ಮರಗಳು ಸಿಕ್ಕಿಹಾಕಿಕೊಳ್ಳದಂತೆ ಮಾಡಲು ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಪಶ್ಚಿಮವಾಹಿನಿ ನದಿಗೆ ಅಡ್ಡಲಾಗಿ ಕಿರುಅಣೆಕಟ್ಟು ನಿರ್ಮಿಸುವ ಬೇಡಿಕೆ ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಬಂದಿದೆ. ಕಿರು ಅಣೆಕಟ್ಟು ನಿರ್ಮಿಸುವುದರಿಂದ ಕುಡಿಯಲು, ಕೃಷಿಗೆ ನೀರು ಲಭ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆದ್ಯತೆ ಮೇಲೆ ಅನುದಾನ ಬಿಡುಗಡೆ ಮಾಡ ಲಾಗುವುದೆಂದರು.

ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ, ಮಡಿಕೇರಿ ಅಕ್ರಮ- ಸಕ್ರಮ ಸಮಿತಿ ಸದಸ್ಯ ಸುಬ್ರಹ್ಮಣ್ಯ ಉಪಾಧ್ಯಾಯ, ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net