ವನ್ಯಪ್ರಾಣಿ ಹಾವಳಿ ತಡೆಗೆ ಶಾಶ್ವತ ಯೋಜನೆಗೆ ಆಗ್ರಹಿಸಿ ನ.೨೧ ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ

1mdkn2 - Copy
Published on

ವಿಜಯವಾಣಿ ಸುದ್ದಿಜಾಲ ಸಿದ್ದಾಪುರ
ವನ್ಯಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಬೇಕೆಂದು ಒತ್ತಾಯಿಸಿ ನ.೨೧ ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಹೇಳಿದರು.

ಸ್ವರ್ಣಮಾಲಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ರೈತರು, ಕಾರ್ಮಿಕರು, ಆದಿವಾಸಿ ಬುಡಕಟ್ಟು ಜನಾಂಗದ ಸಂಘ- ಸಂಸ್ಥೆಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದಿಂದ ಅರಣ್ಯ ಭವನದವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಗುವುದೆಂದರು.

ವನ್ಯಪ್ರಾಣಿ ಹಾವಳಿ ತಡೆಗಟ್ಟಲು ಸರ್ಕಾರ ಹಾಗೂ ಅರಣ್ಯ ಇಲಾಖೆ ನಿರ್ಲಕ್ಷೃ ವಹಿಸಿದೆ. ೨೫ ವರ್ಷದಿಂದ ವನ್ಯಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಆದರೆ, ಶಾಶ್ವತ ಯೋಜನೆ ರೂಪಿಸುವಲ್ಲಿ ಸಂಬಂಧಿಸಿದವರು ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತ ಪಡಿಸಿದರು. ಬೆಳೆ ಹಾನಿ ಹಾಗೂ ಜೀವ ಹಾನಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ ಎಂದು ಟೀಕಿಸಿದರು.

ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಸುಜಯ್ ಬೋಪಯ್ಯ, ಸಂಚಾಲಕ ಸುಭಾಷ್ ಸುಬ್ಬಯ್ಯ, ಖಜಾಂಚಿ ಇಟ್ಟಿರ ಸಬಿತಾ ಭೀಮಯ್ಯ, ಕಾನೂನು ಸಲಹೆಗಾರ ಕೆ.ಬಿ. ಹೇಮಚಂದ್ರ, ಸಿದ್ದಾಪುರ ಶಾಖೆ ಅಧ್ಯಕ್ಷ ದೇವಣಿರ ಬೋಪಯ್ಯ, ಕಾರ್ಮಿಕ ಮುಖಂಡರಾದ ಪಿ.ಆರ್. ಭರತ್, ಎಚ್.ಎಂ. ಸೋಮಪ್ಪ, ಎನ್.ಡಿ. ಕುಟ್ಟಪ್ಪ, ಸಿದ್ದಾಪುರ ಗ್ರಾಪಂ ಅಧ್ಯಕ್ಷೆ ತೀತಮಾಡ ರೀನಾ ತುಳಸಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net