ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ

9mdkf1 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ವಿವಿಧ ಕ್ಷೇತ್ರದಲ್ಲಿ ಪ್ರಶಸ್ತಿ ಪಡೆದ ಸಂಸ್ಥೆಯ ಸಾಧಕರನ್ನು ಸನ್ಮಾನಿಸಲಾಯಿತು.

ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ, ನಾಡ ಪೆದ ಆಶಾ ಚಿತ್ರಕ್ಕೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಪುರಸ್ಕೃತರಾದ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತರಾದ ಟಿ.ಕೆ. ವಾಮನ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಸ್ಥಾನಿಕ ಆಯುಕ್ತ ಎಚ್.ಆರ್. ಮುತ್ತಪ್ಪ, ಜಿಲ್ಲಾ ತರಬೇತಿ ಆಯುಕ್ತ ಮೈಥಿಲಿ ರಾಜ್, ಜಿಲ್ಲಾ ಖಜಾಂಚಿ ಪುಷ್ಪವೇಣಿ, ಮಡಿಕೇರಿ ಸ್ಥಳೀಯ ಸಂಸ್ಥೆ ಮುಖ್ಯಸ್ಥರಾದ ನೀಲಮ್ಮ, ತಂಗಮ್ಮ, ಜಿಲ್ಲಾ ಸಂಸ್ಥೆ ಮಾಜಿ ಕಾರ್ಯದರ್ಶಿ ಡೀಝಿ, ಸಂಪಾಜೆ ಸ್ಥಳೀಯ ಸಂಸ್ಥೆ ಸಹ ಕಾರ್ಯದರ್ಶಿ ಕೆ.ಯು. ರಂಜಿತ್, ಜಿಲ್ಲಾ ಕಾರ್ಯದರ್ಶಿ ಎಂ.ಎಂ. ವಸಂತಿ, ಪೊನ್ನಂಪೇಟೆ ಸ್ಥಳೀಯ ಸಂಸ್ಥೆ ಸಹ ಕಾರ್ಯದರ್ಶಿ ಅಲೀಮ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net